ಕಲ್ಪ ಮೀಡಿಯಾ ಹೌಸ್
ಸಿರುಗುಪ್ಪ: ನಿತ್ಯ ಸುದ್ದಿ ಮಾಡಲು ತೆರಳಿ ಮಹಾಮಾರಿಯನ್ನು ತೆಗೆದುಕೊಂಡು ಬಂದು ಅದೆಷ್ಟೋ ಪತ್ರಕರ್ತರು ಅಸುನೀಗುತ್ತಿದ್ದರೂ, ಅವರ ಬಗ್ಗೆ ಕಿಂಚಿತ್ತು ಕಾಳಿಜಿಯಿಲ್ಲ. ಪತ್ರಕರ್ತರು ಮತ್ತು ಅವರ ಕುಟುಂಬಗಳು ಆಭದ್ರತೆಯಲ್ಲಿದ್ದರೂ ಅವರ ಕಡೆಗೆ ಸರ್ಕಾರ ಏಕೆ ಗಮನ ಹರಿಸುತ್ತಿಲ್ಲ. ವಿವಿಧ ವಲಯದ ಬಗ್ಗೆ ಸುದ್ಧಿ ಕೊಡುವ ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಕೊಡಬೇಕು ಎಂದು ಕುಮಾರ್ ನಾಯಕ್ ಸಿರುಗುಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೊರೋನ ಪ್ರಾರಂಭವಾದಗಿನಿಂದಲೂ ಪತ್ರಕರ್ತರು ತಮ್ಮ ಜೀವದ ಹಂಗನ್ನು ತೊರೆದು ನಗರ, ಪಟ್ಟಣ ಹಾಗೂ ಹಳ್ಳಿಗಳಲ್ಲಿ ತಿರುಗಿ ವಾಸ್ತವ ಸ್ಥಿತಿಯ ಸುದ್ದಿಯನ್ನು ಪ್ರಕಟಿಸಿ ಸರ್ಕಾರದ ಕಣ್ಣು ತೆರಸುವ ಪ್ರಾಮಾಣಿಕ ಕೆಲಸ ಮಾಡುತ್ತಿದೆ. ಅಲ್ಲದೆ, ಸೋಂಕಿತರಿರುವ ಸ್ಥಳಗಳಿಗೆ ತೆರಳಿ ಅವರಿಗೆ ಆಗುವ ಅನುಕೂಲ ಮತ್ತು ಅನಾನುಕೂಲ ಬಗ್ಗೆ ತಿಳಿಸುವ ಪತ್ರಕರ್ತರಿಗೆ ಯಾವಾಗ ಸೋಂಕು ಹರಡುತ್ತೇ ಎನ್ನುವ ಆತಂಕದಲ್ಲಿ ನಿತ್ಯ ಸಾರ್ವಜನಿಕರ ಬಗ್ಗೆ ಕಳಿಕಳಿಯಳ್ಳ ಪತ್ರಕರ್ತರು ಯಾವುದೇ ಫಲಾಪೇಕ್ಷವಿಲ್ಲದೇ ಸಾರ್ವಜನಿಕರ ರಂಗದಲ್ಲಿರುವ ಪತ್ರಕರ್ತರು ಮತ್ತು ಅವರ ಕುಟುಂಬಗಳು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ಸರ್ಕಾರದ ಗಮನಕ್ಕೆ ಯಾಕೆ ಬರುತ್ತಿಲ್ಲ? ಎಂದು ಪ್ರಶ್ನಿಸಿದ್ಧಾರೆ.
ಆಭದ್ರತೆಯಲ್ಲಿ ಕೆಲಸ ಮಾಡುತ್ತಿರುವ ಮಾಧ್ಯಮದ ಸ್ನೇಹಿತರು ಕೊರೋನ ಸೋಂಕಿಗೆ ಬಲಿಯಾಗಿ ಅದೆಷ್ಟೊ ಜನ ಪತ್ರಕರ್ತರು ಮರಣ ಹೊಂದಿ, ಕುಟುಂಬದ ಆಧಾರದವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ಅನಾಥವಾಗಿ ಬೀದಿ ಪಾಲಾದ ಕುಟುಂಬಗಳ ನೋವಿನ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲವೇ? ಪತ್ರಕರ್ತರಿಗೆ ಪ್ಯಾಕೇಜ್ ನೀಡದಿರುವುದು ಪತ್ರಿಕೆ ರಂಗದಲ್ಲಿರುವ ಸ್ನೇಹಿತರಿಗೆ ನಿರಾಶೆಯಾಗಿದೆ ಸರ್ಕಾರ ತಕ್ಷಣವೇ ಪತ್ರಕರ್ತರ ನೋವನ್ನು ತಿಳಿದುಕೊಂಡು ಅವರಿಗೂ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಕುಮಾರ್ ನಾಯಕ್ ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post