ಕಲ್ಪ ಮೀಡಿಯಾ ಹೌಸ್
ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ನಗರದ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಶಾಂತಮ್ಮ (45) ಎಂದು ಗುರುತಿಸಲಾಗಿದ್ದು, ಸಿರಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದ ರಾಜ್ಯ ಹೆದ್ದಾರಿ 150-ಎ ರಲ್ಲಿ ಈ ಘಟನೆ ನಡೆದಿದೆ.
ಟೈರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಸಿರಗುಪ್ಪ ಪಟ್ಟಣದಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಈ ದುರಂತ ಸಂಭವಿಸಿದ್ದು, ಸ್ಥಳಕ್ಕೆ ತೆಕ್ಕಲಕೋಟೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post