ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಚಾರ್ಮಡಿ ಘಾಟ್’ನ ಎರಡನೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ನೂರು ಅಡಿ ಪ್ರಪಾತಕ್ಕೆ ಬಿದ್ದಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪದಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್. ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್, ಸಾಕ್ಷಿ, ಸಂಬAಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಈ ಪೈಕಿ ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹಾಗೂ ಉಳಿದವರನ್ನು ಉಜಿರೆ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಿಸಲಾಗಿದೆ.
Also read: ಆರ್‌ಎಸ್‌ಎಸ್ ಬಗ್ಗೆ ಟೀಕೆ ಹಿನ್ನೆಲೆ: ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ವಾಗ್ದಾಳಿ
ಸರೋಜಿನಿ ಶೆಟ್ಟಿ (64) ಅವರು ಮಂಗಳೂರಿಗೆ ಕರೆದೊಯ್ಯುವ ವೇಳೆಯೇ ದಾರಿ ಮಧ್ಯೆಯೇ ತೀವ್ರವಾಗಿ ಬಳಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post