No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

kalpa News by kalpa News
July 3, 2023
in ದಕ್ಷಿಣ ಕನ್ನಡ
0
ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಳ್ತಂಗಡಿ |

ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 194 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ ಎಂದು ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ತಿಳಿಸಿದ್ದಾರೆ.

ಅವರು ಇಲ್ಲಿ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ, 1953 ರಲ್ಲಿ ಪುತ್ತೂರಿನ ಪೋಳ್ಯದಲ್ಲಿ ಜನಿಸಿದ ರಾಮಕೃಷ್ಣ ಶಾಸ್ತ್ರಿಅವರು ಎಳವೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ನೆಲೆಸಿದ್ದು ತನ್ನ 11 ನೆಯ ವಯಸ್ಸಿನಲ್ಲಿ ಬರವಣಿಗೆ ಆರಂಭಿಸಿದ್ದರು. 7 ನೆಯ ತರಗತಿವರೆಗೆ ಮಾತ್ರ ಶಾಲಾ ವಿದ್ಯಾಭ್ಯಾಸ ಮಾಡಿದ್ದರೂ ಶಾಲೆ, ಪದವಿ ತರಗತಿಗೆ ಪಠ್ಯವಾಗುವಷ್ಟು ಸಮಗ್ರ ಬರವಣಿಗೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಆ ದಿನ ಅಪರಾಹ್ನ 2 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು ಕಾರ್ಯಕ್ರಮಕ್ಕೆ ಚಾಲನೆಯನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಪ್ರಾಚಾರ್ಯ ಡಾ| ಎನ್. ಎಂ. ಜೋಸೆಫ್ ನೀಡಲಿದ್ದಾರೆ. ಯಕ್ಷಗಾನಾಮೃತದಲ್ಲಿ ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಗಿರೀಶ್ ರೈ ಕಕ್ಯಪದವು, ಹಿಮ್ಮೇಳದಲ್ಲಿ ಕೃಷ್ಣಪ್ರಕಾಶ ಉಳಿತ್ತಾಯ, ಶಿತಿಕಂಠ ಭಟ್ ಉಜಿರೆ, ನಿರೂಪಣೆಯಲ್ಲಿ ಬಿ. ಎನ್. ಗಿರೀಶ್ ಹೆಗ್ಡೆ ಧರ್ಮಸ್ಥಳ ಭಾಗವಹಿಸುತ್ತಾರೆ.

ಅಪರಾಹ್ನ 3.30 ರಿಂದ ಪ. ರಾಮಕೃಷ್ಣ ಶಾಸ್ತ್ರಿಗಳ ಸಾಹಿತ್ಯ ಅವಲೋಕನದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಂ. ಪಿ. ಶ್ರೀನಾಥ್ ಉಜಿರೆ ವಹಿಸಲಿದ್ದಾರೆ. ಪತ್ರಿಕಾ ಲೇಖನ ವಿಷಯದ ಕುರಿತು ಉದಯವಾಣಿ ನಿವೃತ್ತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ ಮಣಿಪಾಲ, ಸಮಗ್ರ ಸಾಹಿತ್ಯ ಕುರಿತು ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಉಪನ್ಯಾಸಕ ಡಾ. ಕೃಷ್ಣಾನಂದ ಪಿ.ಎಂ. ಗರ್ಡಾಡಿ, ಮಕ್ಕಳ ಸಾಹಿತ್ಯ ಕುರಿತು ಬೆಳ್ತಂಗಡಿಯವರೇ ಆದ ಸಾಹಿತಿ ಡಾ| ದೀಪಾ ಪಡ್ಕೆ ಬೆಂಗಳೂರು ಮಾತನಾಡಲಿದ್ದಾರೆ.

https://kalpa.news/wp-content/uploads/2023/05/Jain-Public-School.mp4

ಸಂಜೆ 5 ರಿಂದ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು ಪುಸ್ತಕ ಬಿಡುಗಡೆ, ಅಭಿನಂದನೆ,  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಗೌರವ ಸಾನ್ನಿಧ್ಯ ವಹಿಸಲಿದ್ದು, ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅಧ್ಯಕ್ಷತೆ  ವಹಿಸಲಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತ್ರಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಸ್ತ್ರಿಉಪಸ್ಥಿತರಿರುತ್ತಾರೆ.
ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆಯಾಗಲಿವೆ ಎಂದರು.

Also read: ಗುರುಗಳ ಮಾರ್ಗದರ್ಶನವನ್ನು ಮಕ್ಕಳು ಎಂದಿಗೂ ಮರೆಯಬಾರದು: ಡಾ. ಧನಂಜಯ ಸರ್ಜಿ

ಮಕ್ಕಳ ಕತೆ ಇವರ ಜನಪ್ರಿಯ ಮಾಧ್ಯಮವಾದರೂ ಕತೆ, ಲೇಖನ, ಕಾದಂಬರಿ, ಕವಿತೆ, ವಿಡಂಬನೆ, ನಾಟಕ, ಹನಿಗವನ ಹೀಗೆ ಎಲ್ಲ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆಕಾಶವಾಣಿ, ದೂರದರ್ಶನದಲ್ಲೂ ಕಾರ್ಯಕ್ರಮಗಳು ಪ್ರಸಾರವಾಗಿವೆ. ಲೇಖನಗಳು, ಕತೆಗಳು ತುಳು, ಇಂಗ್ಲಿಷ್, ಮಲಯಾಳ, ಹಿಂದಿ ಭಾಷೆಗೆ ಅನುವಾದಗೊಂಡಿವೆ. ಸಮಾಜಸೇವೆ, ಅಭಿವೃದ್ಧಿಯ ಪುರೋಗಾಮಿ ಚಿಂತನೆ, ಸಹಕಾರಿ ಕ್ಷೇತ್ರದಲ್ಲೂ ಅನುಭವ, ಯಕ್ಷಗಾನ ಕ್ಷೇತ್ರದಲ್ಲೂ ಭಾಗವಹಿಸುವಿಕೆ ಇದೆ. ಹೀಗೆ ಎಲ್ಲ ರಂಗದಲ್ಲಿ ತೊಡಗಿಸಿಕೊಂಡವರು. ಈ ನಿಟ್ಟಿನಲ್ಲಿ ಅವರ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ನಡೆಸಬೇಕೆಂಬ ಇರಾದೆಯಿಂದ ಆತ್ಮೀಯರು ಒಟ್ಟಾಗಿ ಈ ಸಮಾರಂಭ ಆಯೋಜಿಸಲಾಗಿದೆ. ಶಾಸ್ತ್ರಿಯವರ ಒಡನಾಡಿಗಳು, ಆತ್ಮೀಯರು, ಬಂಧುಗಳು, ಸಾಹಿತ್ಯದ ಪರಿಚಾರಕರು, ಸಾರ್ವಜನಿಕರು ಈ ಸಮಾರಂಭದಲ್ಲಿ ಭಾಗವಹಿಸಿ ಸಾಹಿತ್ಯ ಪರಿಚಾರಕರ ಈ ಸಮಾರಂಭವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಬೇಕೆಂದು ಸಮಿತಿಯ ಸರ್ವಸದಸ್ಯರ ಅಪೇಕ್ಷೆಯಾಗಿದೆ.

https://kalpa.news/wp-content/uploads/2023/05/VID-20230516-WA0005-1.mp4

ಸುವರ್ಣ, ಸಂಚಾಲಕರು, ಪ.ರಾ.ಶಾಸ್ತ್ರಿಅಭಿನಂದನ ಸಮಿತಿ ಸಂಪತ್, ಕುರಿಯ ವಿಠಲಶಾಸ್ತ್ರಿಸಾಂಸ್ಕೃತಿಕ ಪ್ರತಿಷ್ಠಾನ ಸಂಚಾಲಕ ಎನ್. ಅಶೋಕ ಭಟ್ ಉಜಿರೆ, ದ.ಕ. ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ಘಟಕ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯದುಪತಿ ಗೌಡ ಉಪಸ್ಥಿತರಿರಲಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Belthangadicoastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಬೆಳ್ತಂಗಡಿಮಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗುರುಗಳ ಮಾರ್ಗದರ್ಶನವನ್ನು ಮಕ್ಕಳು ಎಂದಿಗೂ ಮರೆಯಬಾರದು: ಡಾ. ಧನಂಜಯ ಸರ್ಜಿ

Next Post

ಪಕ್ಷ ಕಟ್ಟಲು ಕೆಚ್ಚು ಮೂಡಿಸಿದ ಮಾಜಿ ಪ್ರಧಾನಿ ದೇವೇಗೌಡ

kalpa News

kalpa News

Next Post
ಪಕ್ಷ ಕಟ್ಟಲು ಕೆಚ್ಚು ಮೂಡಿಸಿದ ಮಾಜಿ ಪ್ರಧಾನಿ ದೇವೇಗೌಡ

ಪಕ್ಷ ಕಟ್ಟಲು ಕೆಚ್ಚು ಮೂಡಿಸಿದ ಮಾಜಿ ಪ್ರಧಾನಿ ದೇವೇಗೌಡ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL