ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಪುನರ್ಪುಳಿ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮೂಡಿಗೆರೆ ಪೊಲೀಸರು ಬಂಧಿಸಿ, ಹೆಡೆಮುರಿ ಕಟ್ಟಿದ್ದಾರೆ.
ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಗಾಂಜಾ ತಯಾರಿಸಿ, ಕಾರಿನಲ್ಲಿ ಪುನರ್ಪುಳಿ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಮಾರುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಅಬೂಬಕ್ಕರ್ ಸಿದ್ದಿಕ್, ಮೂಡಿಗೆರೆಯ ಅಮೃತ್ ಬಿಜುವಳ್ಳಿ, ಮೂಡಿಗೆರೆ ಟೌನ್ ನಿವಾಸಿ ರಿಷಬ್ ರಾಜ್ ಎನ್ನುವವರನ್ನು ಬಂಧಿಸಿದ್ದಾರೆ.
Also read: ಠಾಣೆ ಸಿಬ್ಬಂದಿಗಳ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆದ ಆರೋಪಿ

ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















