ಕಲ್ಪ ಮೀಡಿಯಾ ಹೌಸ್ | ಬೇಲೂರು |
ಇಲ್ಲಿನ ಐತಿಹಾಸಿಕ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತಂತೆ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತರು ಬಸ್ ನಿಲ್ದಾಣದ ಎದುರಿನಲ್ಲಿ ಪ್ರತಿಭಟನೆ ನಡೆಸಿದ್ದು, ಸ್ವಾಮಿಯ ರಥೋತ್ಸವದ ವೇಳೆ ಖಾಜಿಯಿಂದ ಕುರಾನ್ ಪಠಣವಾಗುತ್ತದೆ. ಇದು ಹಿಂದೂ ಧರ್ಮಕ್ಕೆ ಮಾಡುವ ಅಪಮಾನವಾಗಿದೆ. ಇದನ್ನು ಈ ಬಾರಿಯಿಂದ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆ ವೇಳೆ ಬೈಕ್’ನಲ್ಲಿ ಬಂದ ಯುವಕನೋರ್ವ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ಇದರಿಂದ ಕೆರಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆತನನ್ನು ಥಳಿಸಲು ಮುಂದಾಗಿದ್ದಾರೆ. ಆದರೆ, ತತಕ್ಷಣ ಎಚ್ಚೆತ್ತ ಪೊಲೀಸರು ಕುರಾನ್ ಜಿಂದಾಬಾದ್ ಘೋಷಣೆ ಕೂಗಿದ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
Also read: ಮುಸ್ಲೀಮರು ರೊಚ್ಚಿಗೆದ್ದಿದ್ದರೆ ರಕ್ತಪಾತವಾಗುತ್ತಿತ್ತು, ಅವರ ತಾಳ್ಮೆ ಮೆಚ್ಚಬೇಕು: ಮಾಜಿ ಸಿಎಂ ಕುಮಾರಸ್ವಾಮಿ
ಶ್ರೀ ಚನ್ನಕೇಶವ ಸ್ವಾಮಿಯವರ ಬ್ರಹ್ಮ ರಥೋತ್ಸವ ಎಪ್ರಿಲ್ 4ರಂದು ನಡೆಯಲಿದ್ದು, ಈ ಸಂಬAಧಿತ ಧಾರ್ಮಿಕ ವಿಧಿವಿಧಾನಗಳು ಹಾಗೂ ಆಚರಣೆಗಳು ಈಗಾಗಲೇ ಆರಂಭವಾಗಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post