ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದ ಬಾಲಕಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಟಿಸಿ ಪಾಳ್ಯ-ಭಟ್ಟರಹಳ್ಳಿ ನಡುವೆ ಘಟನೆ ನಡೆದಿದ್ದು, ಬಾಲಕಿಯನ್ನು ತತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಮಕ್ಕಳ ಜೊತೆಯ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಲಾವ್ಯಶ್ರೀ(15) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಪ್ರಿಯದರ್ಶಿನಿ ಹಾಗೂ ಯಾಶ್ವಿನ್ ಎಂಬ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post