ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನ (Bengaluru) ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯೋತ್ಸವ (Kannada Rajyotsava) ಸಮಾರಂಭದಲ್ಲಿ ಸುಮಾರು 20 ಸಾವಿರ ಶಾಲಾ ಮಕ್ಕಳು ಭಾಗವಹಿಸಿ ಸಂಭ್ರಮಿಸಿದರು.
ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ಬಾಗಲಗುಂಟೆ, ಚಿಕ್ಕಬಿದರಕಲ್ಲು ಹಾಗೂ ನೆಲಗದರನಹಳ್ಳಿಯ ಸರ್ಕಾರಿ ಪ್ರೌಢಶಾಲೆಗಳ ಸುಮಾರು 1,600 ವಿದ್ಯಾರ್ಥಿಗಳು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳ ಸಂಘಟಿತ ಪ್ರದರ್ಶನ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಣೆ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಭಿನಂದನಾ ಪತ್ರವನ್ನು ವಿತರಿಸಲಾಯಿತು. ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಒಳಗೊಂಡ ಕಾರ್ಯಕ್ರಮದಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
Also Read>> ಹಾಸನ: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿದ ರೈಲ್ವೆ ರಕ್ಷಣಾ ಪಡೆ
Bengaluru: ಮಧು ಬಂಗಾರಪ್ಪಗೆ ಸಿಎಂ ಅಭಿನಂದನೆ
ಕಾರ್ಯಕ್ರಮದ ಅಚ್ಚುಕಟ್ಟಾದ ಆಯೋಜನೆ, ವ್ಯವಸ್ಥಿತ ನಿರ್ವಹಣೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಕಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಮುಖ್ಯಮಂತ್ರಿ ಅಭಿನಂದಿಸಿದರು. ವಿದ್ಯಾರ್ಥಿಗಳಿಗೆ ಇಂತಹ ದೊಡ್ಡ ವೇದಿಕೆ ಕಲ್ಪಿಸಿ ಸಾಂಸ್ಕೃತಿಕ ಪ್ರತಿಭೆ ಪ್ರದರ್ಶಿಸಲು ಅವಕಾಶ ನೀಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸುಮಾರು 20 ಸಾವಿರ ವಿದ್ಯಾರ್ಥಿಗಳ ಭಾಗವಹಿಸುವಿಕೆಯೊಂದಿಗೆ ನಡೆದ 71ನೇ ಕರ್ನಾಟಕ ರಾಜ್ಯೋತ್ಸವದ ಈ ಸಮಾರಂಭವು ಮಕ್ಕಳ ಸಾಂಸ್ಕೃತಿಕ ಪ್ರತಿಭೆ ಮತ್ತು ಕನ್ನಡ ನಾಡಿನ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










