No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

kalpa News by kalpa News
April 3, 2026
in ಬೆಂಗಳೂರು ನಗರ
0
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಸ್ತುತ ನಗರದಲ್ಲಿ ಕಾಮಗಾರಿ ಅರ್ಧಕ್ಕೇ ಸ್ಥಗಿತಗೊಳಿಸಿರುವ ರಾಜರಾಜೇಶ್ವರಿ ನಗರ ಮತ್ತು ದೊಮ್ಮಸಂದ್ರದ ಫ್ಲೈಓವರ್ ಯೋಜನೆಗಳನ್ನು ಸೇರಿದಂತೆ, ನಗರಾಭಿವೃದ್ಧಿ ಪ್ರಾಧಿಕಾರವು ಕೈಗೊಳ್ಳಲು  ಉದ್ದೇಶಿಸಿರುವ ಅನೇಕ ಯೋಜನೆಗಳನ್ನು ಅಸಂಬದ್ಧ/ಅರ್ಥಹೀನ ಎಂದು ವಿರೋಧಿಸಿ, ಗ್ರೀನ್‌ಪೀಸ್ ಇಂಡಿಯಾ Greenpeace India ಮತ್ತು ಬೆಂಗಳೂರು ರೈಸಿಂಗ್ ಅಭಿಯಾನದ Bengaluru Rising Campaign ಭಾಗವಾಗಿರುವ ಹಲವು ನಾಗರಿಕ ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಇಂದು ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರು ಈ ಯೋಜನೆಗಳನ್ನು “ಮೂರ್ಖ ಯೋಜನೆಗಳು” Stupid Projects ಎಂದು ಘೋಷಿಸುತ್ತ, ಯೋಜನಾಸ್ಥಳಗಳ ಸಮೀಪ ಪ್ರತಿಭಟಿಸಿ ಈ ಕುರಿತು ಸಾರ್ವಜನಿಕರ ಗಮನ ಸೆಳೆದರು. ನಾಲ್ಕು ವರ್ಷಕ್ಕೂ ಹೆಚ್ಚುಕಾಲದಿಂದ ಸ್ಥಗಿತಗೊಂಡಿರುವ ರಾಜರಾಜೇಶ್ವರಿ ನಗರದ ಕಮಾನಿನ ಬಳಿಯ ಫ್ಲೈಓವರ್ ಮತ್ತು ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೊಮ್ಮಸಂದ್ರ ಫ್ಲೈಓವರ್ ಯೋಜನೆಗಳು ಬೃಹತ್‌ಯೋಜನೆಗಳು ಪೂರ್ಣವಾಗದೆ ನಗರದ ದೈನಂದಿನ ಜೀವನಕ್ಕೆ ಹೇಗೆ ಅಡ್ಡಿಯಾಗಿವೆ ಎಂಬುದರ ಕುರಿತು ಪ್ರತಿಭಟನೆಯಲ್ಲಿ ವಿವರಿಸಲಾಯಿತು. ಮೈಸೂರು ಲ್ಯಾಂಪ್ಸ್ ಪ್ರದೇಶದಲ್ಲಿ ಕನ್‌ವೆನ್‌ಷನ್‌ಸೆಂಟರ್ ನಿರ್ಮಾಣಕ್ಕಾಗಿ ನಗರ ತನ್ನ ಪ್ರಮುಖ ಅರಣ್ಯಪ್ರದೇಶವನ್ನೇ ಕಳೆದುಕೊಳ್ಳುವ ಸಾಧ್ಯತೆಯ ಕುರಿತು ಪ್ರತಿಭಟನೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರೀನ್‌ಪೀಸ್ ಇಂಡಿಯಾದ ಹವಾಮಾನ ಮತ್ತು ಇಂಧನ ವಿಭಾಗದ ಕ್ಯಾಂಪೇನರ್‌ಅಮೃತಾ ಎಸ್‌.ಎನ್‌., ‘ಮೂರ್ಖʼ ಯೋಜನೆಗಳು ಎಂದರೆ, ದೈನಂದಿನ ಜನಜೀವನಕ್ಕೆ ಅಡ್ಡಿ ಉಂಟುಮಾಡುವ, ವಿಳಂಬಗತಿಯಲ್ಲಿ ಸಾಗುವ, ಭರಿಸಲಾಗದ ವೆಚ್ಚಗಳ ಹೊರೆಯಿಂದ ಕೂಡಿರುವ, ಇನ್ನೂ ಪೂರ್ಣಗೊಳ್ಳದ ಅಥವಾ ಉದ್ಧೇಶಿತ ಸಮಸ್ಯೆಗಳನ್ನೇ ಪರಿಹರಿಸಲು ವಿಫಲವಾಗುವ ಯೋಜನೆಗಳಾಗಿವೆ. ಗ್ರೇಟರ್‌ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಗೆ ಉಮೇದುವಾರ ಅಭ್ಯರ್ಥಿಗಳು, ನಾಗರಿಕರು ವಿರೋಧಿಸುತ್ತಿರುವ ಈ ಸಮಸ್ಯೆಗಳನ್ನು ಚುನಾವಣೆಗೆ ಮುನ್ನವೇ ಬಗೆಹರಿಸಬೇಕು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ನಗೆಪಾಟಲಾಗವುದನ್ನು ತಡೆಯಬೇಕು” ಎಂದು ಹೇಳಿದರು.

ನಗರದಾದ್ಯಂತ ನಡೆಸಲಾದ ಈ ಪ್ರತಿಭಟನೆಗಳು ಕಳೆದ ದಶಕದ ಅಭಿವೃದ್ಧಿ ಮಾದರಿಯ ವಿರುದ್ಧದ ಪ್ರತಿರೋಧವಾಗಿದ್ದು, ಈ ಮಾದರಿಗಳು ಪಾದಚಾರಿ ಮಾರ್ಗ, ಉಸಿರಾಡಲು ಶುದ್ಧ ಗಾಳಿ ಮತ್ತು ನಗರದ ಕಡಿಮೆಯಾಗುತ್ತಿರುವ “ಹಸಿರು-ನೀಲಿ” (ಕೆರೆಗಳು ಮತ್ತು ಉದ್ಯಾನಗಳು) ಪ್ರದೇಶಗಳಿಗಿಂತ ಫ್ಲೈಓವರ್‌ಗಳು ಮತ್ತು ರಸ್ತೆ ವಿಸ್ತರಣೆಗಳಿಗೆ ಆದ್ಯತೆ ನೀಡಿದ್ದನ್ನು ಪ್ರಶ್ನಿಸಿದವು.
ಮಲ್ಲೇಶ್ವರಂ ಪ್ರದೇಶದಲ್ಲಿ ಯೋಜಿಸಲಾಗಿರುವ ಅವಿವೇಕದ ಯೋಜನೆಯ ಕುರಿತು ಮಾತನಾಡುತ್ತ ಮಲ್ಲೇಶ್ವರಂ ಸೋಶಿಯಲ್ ಸದಸ್ಯರಾದ ಕೌಸ್ತುಭ್ ರಾವ್, “ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಮತ್ತು ಜೀವ ವೈವಿಧ್ಯತೆಗೆ ಪ್ರಾಧಾನ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಗರದಲ್ಲಿ ಈಗಿರುವ ಹಸಿರು ಆವರಣವನ್ನು ರಕ್ಷಿಸುವುದು ಮೊದಲ ಹೆಜ್ಜೆಯಾಗಬೇಕು. ನಿಷ್ಕ್ರಿಯಗೊಂಡಿರುವ ಮೈಸೂರು ಲ್ಯಾಂಪ್ಸ್ ಕಾರ್ಖಾನೆಯ ಸಮೀಪದ ದಟ್ಟ ಅರಣ್ಯ ಪರಿಸರವು ಎಲ್ಲ ವರ್ಗದ ಜನರಿಗೆ ಉಪಯುಕ್ತವಾಗುವ ಸಾರ್ವಜನಿಕ ಬಳಕೆಯ ಸ್ಥಳವಾಗಬಹುದು. ಇದನ್ನು ಕನ್‌ವೆನ್‌ಷನ್‌ಸೆಂಟರ್ ಆಗಿ ಪರಿವರ್ತಿಸುವುದು ಕೇವಲ ಕೆಲವೇ ವರ್ಗಗಳಿಗೆ ಉಪಯುಕ್ತವಾಗುತ್ತದೆ. ಇದು ಟ್ರಾಫಿಕ್, ಮಾಲಿನ್ಯ ಮತ್ತು ನಗರದ ತಾಪಮಾನವನ್ನು ಹೆಚ್ಚಿಸುತ್ತದೆಯೇ ಹೊರತು, ಜನರಿಗೆ ಬೇಕಾದ ಸಾರ್ವಜನಿಕ ಹಸಿರು ಸ್ಥಳಗಳ ಕೊರತೆಯನ್ನು ಬಗೆಹರಿಸುವುದಿಲ್ಲ” ಎಂದು ತಮ್ಮ ಕಳಕಳಿಯನ್ನು ವ್ಯಕ್ತಪಡಿಸಿದರು.

ಈ ಅಭಿಯಾನವು ಕಳೆದ ಕೆಲವು ತಿಂಗಳಿನಿಂದ ನಗರದಲ್ಲಿ ಹಲವು ನಾಗರಿಕ ಸಂಘಟನೆಗಳು ಮತ್ತು ವಿದ್ಯಾರ್ಥಿಗಳು, ಉದ್ಯೋಗಿಗಳು, ಹಳೆಯ ನಿವಾಸಿಗಳು ಮತ್ತು ಹೊಸ ನಿವಾಸಿಗಳನ್ನು ಒಳಗೊಂಡಂತೆ ನಡೆಸಲಾದ “ಇಮ್ಯಾಜಿನೇರಿಯಂ”ಗಳ ಮುಂದುವರಿದ ಭಾಗವಾಗಿದೆ—ಈ ಕಾರ್ಯಾಗಾರಗಳಲ್ಲಿ ಸರ್ಕಾರದ ದೃಷ್ಟಿಕೋನ (ಸಂಪನ್ಮೂಲ ಹೆಚ್ಚು ಬಳಸುವ ಬೃಹತ್‌ಕಾಂಕ್ರೀಟ್ ನಿರ್ಮಾಣಗಳು ಮತ್ತು ಆ ಮೂಲಕ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡುವ ಭರವಸೆ) ಹಾಗು ನಾಗರಿಕರ ದೃಷ್ಟಿಕೋನ (ನೆರಳು ತುಂಬಿದ, ಪರಸ್ಪರ ಸಂಪರ್ಕ ಹೊಂದಿದ ನಗರ— “ಕೊನೆಯ ನಿಲ್ದಾಣ”ದಿಂದ ಮನೆಗೆ ನಡೆದು ಸಾಗುವ ಕಷ್ಟಕರವಲ್ಲದ ಹಾದಿ) ಇವುಗಳಿಗಿರುವ ವ್ಯತ್ಯಾಸವನ್ನು ತಿಳಿಸಲಾಯಿತು.
ಏಪ್ರಿಲ್ 1ನೇ ತಾರೀಕನ್ನು ಪ್ರತಿಭಟನೆಗೆ ಆಯ್ಕೆಮಾಡುವ ಮೂಲಕ, “ಪೂರ್ವದ ಸಿಲಿಕಾನ್ ವ್ಯಾಲಿ” ಎಂದೇ ಪ್ರಸಿದ್ಧವಾಗಿರುವ ನಗರವು ಇನ್ನೂ ಹಳೆಯ, 20ನೇ ಶತಮಾನದ ನಗರ ಯೋಜನೆಗಳ ಮೇಲೆ ಅವಲಂಬಿತವಾಗಿದೆ ಎನ್ನುತ್ತಾ ಅಸಂಬದ್ಧ ನಗರ ಯೋಜನೆಗಳನ್ನು ಅಣಕ ಮಾಡಲಾಯಿತು.

ಈ ಪ್ರತಿಭಟನೆ ಕೇವಲ ಆಕ್ರೋಶವಾಗಿರದೆ, ಈ ಮೂಲಕ ಬೆಂಗಳೂರು ನಗರಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ “ಇಮ್ಯಾಜಿನೇರಿಯಂ” ಮಾದರಿಯನ್ನು ಅಳವಡಿಸಿಕೊಂಡು, ನಗರ ಯೋಜನೆ, ಬಜೆಟ್ ಮತ್ತು ನೀತಿ ರೂಪಿಸುವ ಪ್ರಕ್ರಿಯೆಗಳಲ್ಲಿ ನಾಗರಿಕರನ್ನು ಒಳಗೊಳ್ಳಬೇಕು ಎಂದು ಗ್ರೀನ್‌ಪೀಸ್‌ಮತ್ತು ನಗರದ ನಾಗರಿಕ ಸಂಘಟನೆಗಳು ಕರೆ ನೀಡಿದವು. ಜನರು ನಗರ ರೂಪುಗೊಳಿಸುವಲ್ಲಿ ಪಾಲ್ಗೊಳ್ಳಬೇಕೇ ಹೊರತು ಮೂರ್ಖ ಯೋಜನೆಗಳಿಗೆ ಬೆಲೆ ತೆರುವವರಾಗಬಾರದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUBengaluru Rising CampaignGreenpeace IndiaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaStupid Projectsಗ್ರೀನ್‌ಪೀಸ್ ಇಂಡಿಯಾಬೆಂಗಳೂರುಬೆಂಗಳೂರು ರೈಸಿಂಗ್ ಅಭಿಯಾನಮೂರ್ಖ ಯೋಜನೆಗಳು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

Next Post

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

kalpa News

kalpa News

Next Post
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL