No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

Bengaluru | ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

kalpa News by kalpa News
July 14, 2026
in ಬೆಂಗಳೂರು ನಗರ
0
former minister ramachandre gowda passes away in bengaluru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಬಿಜೆಪಿಯ ಹಿರಿಯ ಧುರೀಣ, ಮಾಜಿ ಸಚಿವ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ (88) (Ramachandre Gowda) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ಬೆಂಗಳೂರು (Bengaluru) ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

Also Read>> India-Indonesia | ಸಂಸ್ಕೃತಿಯಿಂದ ರಕ್ಷಣೆಯವರೆಗೆ ಸಹಕಾರದ ಹೊಸ ಅಧ್ಯಾಯ

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿಕೊಡಲು ಪ್ರಮುಖ ಪಾತ್ರವಹಿಸಿದ್ದ ರಾಮಚಂದ್ರೇಗೌಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲುಕೊಟ್ಟು ಸಹಕಾರ ನೀಡಿದ ನಾಯಕರಲ್ಲಿ ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೇ ಸಕ್ರಿಯರಾಗಿದ್ದ ಅವರು ಸಂಘಟನೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಪಕ್ಕಾ ಆರ್‌ಎಸ್‌ಎಸ್‌ ಹಿನ್ನೆಲೆಯವರಾದ ಅವರು 1953ರಲ್ಲೇ ಸಂಘಕ್ಕೆ ಸೇರ್ಪಡೆಗೊಂಡು ಸಾರ್ವಜನಿಕ ಜೀವನ ಆರಂಭಿಸಿದರು. ನಂತರ 1970ರಲ್ಲಿ ರಾಜಕೀಯ ಪ್ರವೇಶ ಮಾಡಿದರು.

Bengaluru | ನಗರ ನಿಗಮಕ್ಕೆ ಆಯ್ಕೆಯಾದ ಮೊದಲ ಕಾರ್ಪೊರೇಟರ್

ಬಿಜೆಪಿಯ ಪೂರ್ವ ರೂಪವಾದ ಭಾರತೀಯ ಜನಸಂಘದ ಮೂಲಕ ಬೆಂಗಳೂರು ನಗರ ನಿಗಮಕ್ಕೆ ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಪಕ್ಷದ ಬೇರೂರಿಕೆಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕನಾಗಿ ಹೊರಹೊಮ್ಮಿದ ಅವರು ಸತತ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ದೀರ್ಘಕಾಲದ ಕಾನೂನು ಹೋರಾಟದ ನಂತರ ಹೈಕೋರ್ಟ್ ಅವರು ದೋಷಮುಕ್ತರಾಗಿದ್ದಾರೆ ಎಂದು ತೀರ್ಪು ನೀಡಿತ್ತು.

ಸುಮಾರು ಐದು ದಶಕಗಳ ಸಕ್ರಿಯ ರಾಜಕೀಯ ಜೀವನದ ನಂತರ 2018ರಲ್ಲಿ ವಯೋಸಹಜ ಕಾರಣಗಳಿಂದ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

ಇವರ ನಿಧನದೊಂದಿಗೆ ಕರ್ನಾಟಕ ಬಿಜೆಪಿಯ ಆರಂಭಿಕ ಹಂತದ ಒಂದು ಮಹತ್ವದ ಅಧ್ಯಾಯ ಕೊನೆಗೊಂಡಂತಾಗಿದೆ.

Senior BJP Leader Ramachandregowda Passes Away

Senior BJP leader, former minister, and former Member of the Legislative Council, Ramachandregowda (88), passed away early this morning at a private hospital in Rajajinagar due to age-related ailments.

He had been undergoing treatment for the past one month after suffering from prolonged illness. Despite medical efforts, he breathed his last in the early hours today.

Ramachandregowda was one of the key leaders who played a crucial role in building the Bharatiya Janata Party (BJP) at the grassroots level in Karnataka. He worked closely with former Chief Minister B. S. Yediyurappa and was instrumental in strengthening the party during its formative years.

With a strong Rashtriya Swayamsevak Sangh (RSS) background, he began his public life in 1953 by joining the RSS and later formally entered politics in 1970.

He holds the distinction of being the first corporator elected to the then Bangalore City Corporation (now BBMP) from the Bharatiya Jana Sangh, the predecessor of the BJP. His efforts significantly contributed to establishing the party’s base in Bengaluru.

A prominent figure in state politics, Ramachandregowda was elected as a Member of the Legislative Council five consecutive times. He also served as the Minister for Medical Education in the government led by B. S. Yediyurappa.

In 2010, he resigned from his ministerial post, taking moral responsibility after his name surfaced in a medical college recruitment controversy. However, after a prolonged legal battle, the High Court later cleared him of all charges.

After an active political career spanning nearly five decades, he announced his retirement from politics in 2018 due to age-related reasons.

With his demise, an important chapter in the early history of the BJP in Karnataka has come to an end.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
JNNCE ShivamoggaKalpa News Advertising DisclaimerKalahamsa Infotech private limited

Tags: B S YediyurappaBENGALURUDeath NewsKannada News WebsiteLatest News KannadaPolitical NewsRamachandre Gowdaಬಿ.ಎಸ್. ಯಡಿಯೂರಪ್ಪಬಿಜೆಪಿಬೆಂಗಳೂರುರಾಮಚಂದ್ರೇಗೌಡವಿಧಾನ ಪರಿಷತ್ ಸದಸ್ಯ
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

India-Indonesia | ಸಂಸ್ಕೃತಿಯಿಂದ ರಕ್ಷಣೆಯವರೆಗೆ ಸಹಕಾರದ ಹೊಸ ಅಧ್ಯಾಯ

Next Post

Kalaburagi | ಗೃಹ ಸಚಿವ ಖರ್ಗೆ ತವರು ಜಿಲ್ಲೆ ಜೈಲಿನಿಂದ 3 ಸಜಾ ಕೈದಿಗಳು ಪರಾರಿ

kalpa News

kalpa News

Next Post
Three Convicted Prisoners Escape from Kalaburagi Central Jail

Kalaburagi | ಗೃಹ ಸಚಿವ ಖರ್ಗೆ ತವರು ಜಿಲ್ಲೆ ಜೈಲಿನಿಂದ 3 ಸಜಾ ಕೈದಿಗಳು ಪರಾರಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL