ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚೆಕ್ ಬೌನ್ಸ್ ಪ್ರಕರಣಗಳಲ್ಲಿ Cheque bounce case ಆರೋಪಿಯನ್ನು ಯಾವುದೇ ಕಾರಣಕ್ಕೂ ಗರಿಷ್ಠ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲಿನಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ High Court ಮಹತ್ವದ ಆದೇಶ ನೀಡಿದೆ.
ನೆಗೋಷಿಯೇಬಲ್ ಇನ್ಸುಮೆಂಟ್ಸ್ ಕಾಯ್ದೆ (NI Act) ಸೆಕ್ಷನ್ 138ರಡಿ ದಾಖಲಾಗಿದ್ದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂಬಂಧಿತ ವ್ಯಕ್ತಿ ಹೈಕೋರ್ಟ್ ಮೊರೆ ಹೋಗಿದ್ದನು.
ಕಾನೂನು ಮಿತಿ ನೆನಪಿಸಿದ ನ್ಯಾಯಾಲಯ
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು,
ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಾನೂನುಬದ್ಧವಾಗಿ ವಿಧಿಸಬಹುದಾದ ಗರಿಷ್ಠ ಶಿಕ್ಷೆ ಎರಡು ವರ್ಷಗಳು ಮಾತ್ರ ಎಂದು ಸ್ಪಷ್ಟಪಡಿಸಿದರು.
Also read: ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ
ದಂಡ ಪಾವತಿಸದಿದ್ದರೂ ಮಿತಿ ಅನ್ವಯ
ಆರೋಪಿಯು ದಂಡ ಪಾವತಿಸದಿದ್ದರೂ ಸಹ, 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಈ ತೀರ್ಪು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಶಿಕ್ಷೆಯ ಮಿತಿಯ ಕುರಿತು ಸ್ಪಷ್ಟತೆ ನೀಡಿದ್ದು, ಕಾನೂನು ಪ್ರಕ್ರಿಯೆಯಲ್ಲಿ ಏಕಮಾನತೆ ಕಾಪಾಡಲು ಸಹಕಾರಿ ಆಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















