ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾಷೆಗೂ ಸಂಸ್ಕೃತಿಗೂ ಅನ್ಯೋನ್ಯ ಸಂಬಂಧವಿದ್ದು, ಭಾಷೆಯನ್ನು ಉಳಿಸಿ ಬೆಳಸುವ ಮೂಲಕ ಸಂಸ್ಕೃತಿಯನ್ನು ಉಳಿಸಿಕೊಳ್ಳ ಬಹುದಾಗಿದೆ. ಪ್ರಾಂತ್ಯವಾರು ವೈವಿಧ್ಯತೆಯ ಜೊತೆಗೆ ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಹವಿಗನ್ನಡದ
ಸಂವರ್ಧನೆಗಾಗಿ ರಾಜ್ಯ ಸರ್ಕಾರವು “ಹವ್ಯಕ ಭಾಷಾ ಅಕಾಡೆಮಿ”ಯನ್ನು #Havyaka Bhasha Academy ಸ್ಥಾಪಿಸಲು ನಿರ್ಧರಿಸಿರುವ ನಿರ್ಣಯವನ್ನು ಶ್ರೀರಾಮಚಂದ್ರಾಪುರ ಮಠವು #Shri Ramachandrapura Mutt ಸ್ವಾಗತಿಸುತ್ತದೆ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ #CM Siddaramaiah ಅಭಿನಂದನೆಗಳನ್ನು ಸಲ್ಲಿಸುತ್ತದೆ.
ಮಾತೃಭಾಷೆಯ ಉಳಿವು ಹಾಗೂ ಜಾಗೃತಿಗಾಗಿ ಕಳೆದ ವರ್ಷದ ತಮ್ಮ ಚಾತುರ್ಮಾಸ್ಯವನ್ನು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ‘ಸ್ವಾಭಾಷಾ ಚಾತುರ್ಮಾಸ್ಯ’ವಾಗಿ ಆಚರಿಸಿ, ಭಾಷೆಯ ಕುರಿತಾಗಿ ನಾಡಿನಾದ್ಯಂತ ಜಾಗೃತಿ ಮೂಡಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದ್ದು, ಕನ್ನಡದ ಉಪಭಾಷೆ ಹವಿಗನ್ನಡದ ಸಂರಕ್ಷಣೆಗೆ ಇದೀಗ ಸರ್ಕಾರವೇ ಮುಂದಾಗಿರುವುದು ಅಭಿನಂದನೀಯವಾಗಿದೆ.
ಸರ್ಕಾರದ ಈ ನಿರ್ಧಾರವು ಹವ್ಯಕ ಭಾಷೆಯ ಉಳಿವು, ಬೆಳವಣಿಗೆ ಹಾಗೂ ಅದರ ಅಧ್ಯಯನ ಮತ್ತು ಸಂಶೋಧನೆಗೆ ಹೊಸ ಉತ್ತೇಜನ ನೀಡಲಿದೆ ಹಾಗೂ ಅಕಾಡೆಮಿಯ ಮೂಲಕ ಭಾಷೆಯ ಪ್ರಚಾರ ಹಾಗೂ ಯುವಪೀಳಿಗೆಗೆ ಅದರ ಮಹತ್ವ ಪರಿಚಯಿಸುವ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿವೆ ಎಂದು ಶ್ರೀ ರಾಮಚಂದ್ರಾಪುರ ಮಠವು ಆಶಿಸುತ್ತದೆ. ಹಾಗೂ ಭಾಷಾ ಉಳಿವಿನ ಈ ಕಾರ್ಯಕ್ಕೆ ಮುನ್ನುಡಿ ಬರೆದ ಶ್ರೀ ಅಖಿಲ ಹವ್ಯಕ ಮಹಾಸಭೆ ಮತ್ತು ಕೈಜೋಡಿಸಿದ ಎಲ್ಲರಿಗೂ ಶ್ರೀಮಠವು ಶುಭಹಾರೈಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















