ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ನ ಸಚಿವರು ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ #DK Shivakumar ಡಿನ್ನರ್ ಯೋಜನೆ ಮಾಡಿದ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ #CM Siddaramaiah ಸಹ ಡಿನ್ನರ್ ಪಾರ್ಟಿ ಯೋಜನೆ ಮಾಡಿದ್ದು ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.
ಹೌದು… ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















