ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕಚೇರಿಯ ಮೂವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಶ್ರೀರಾಮುಲು ಅವರ ಇಬ್ಬರು ಆಪ್ತರಿಗೆ ಈ ಹಿಂದೆ ಪಾಸಿಟಿವ್ ಬಂದಿದ್ದು, ಈಗ ಅವರ ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಪಾಸಿಟಿವ್ ಬಂದಿದೆ. ಹೀಗಾಗಿ, ವಿಧಾನಸೌಧದಲ್ಲಿರುವ ಸಚಿವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಇನ್ನು, ಪಾಸಿಟಿವ್ ಕಾಣಿಸಿಕೊಂಡ ಸಿಬ್ಬಂದಿಯೊಬ್ಬರಿಂದಲೇ ಇವರ ಕಚೇರಿಯಲ್ಲಿ ಎಲ್ಲರಿಗೂ ಸೋಂಕು ಹರಡಿದೆ ಎಂದು ಹೇಳಲಾಗಿದೆ.
ಇನ್ನು, ಸಿಬ್ಬಂದಿಯಲ್ಲಿ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಇದೀಗ ಕೆಸಿ ಜನರಲ್ ಆಸ್ಪತ್ರೆಯಲ್ಲಿ 50 ಮಂದಿ ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸಲಾಗಿದೆ ಎನ್ನಲಾಗುತ್ತಿದೆ.
Get In Touch With Us info@kalpa.news Whatsapp: 9481252093















