ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಾಮರಾಜಪೇಟೆಯಲ್ಲಿ #Chamarajapet ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಆರೋಪಿಯನ್ನು ಶೇಕ್ ನಸ್ರು(30) ಎಂದು ಗುರುತಿಸಲಾಗಿದ್ದು, ಆತನಿಗೆ ಜ.24ರವರೆಗೂ ನ್ಯಾಯಾಂಗ ಬಂಧನಕ್ಕೆ #JudicialCustody ಒಳಪಡಿಸಲಾಗಿದೆ.
Also Read>> ಮಕರ ಸಂಕ್ರಾಂತಿ | ಎಳ್ಳು ಬೆಲ್ಲ ಸೇವನೆ | ಸನಾತನ ಧರ್ಮದ ವೈಜ್ಞಾನಿಕ ಕಾರಣ ಏನು? ತಿಳಿಯಲೇಬೇಕಾದ ಮಾಹಿತಿ
ಬಂಧಿತ ನಸ್ರು ಬಿಹಾರ #Bihar ರಾಜ್ಯದ ಚಂಪಾರನ್ ಮೂಲದವನಾಗಿದ್ದಾನೆ. ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆರೋಪಿ ನಸ್ರುನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಜನವರಿ 24ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ.
ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.
ಹಸುಗಳ ಮಾಲೀಕ ಕರ್ಣ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್, ಎಂಎಲ್‌ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು.
ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಪ್ರತಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post