ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ D K Shivakumar ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Governor Thawar Chand Gehlot ಪ್ರಮಾಣ ವಚನ ವಿಧಿಯನ್ನು ಬೋಧಿಸಿದರು. ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವನಚ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಎಲ್ಲಾ ಶ್ರೀಗಳು, ಧರ್ಮಗುರುಗಳಿಂದ ಆಶೀರ್ವಾದ ಪಡೆದರು. ಆದಿಚುಂಚನಗಿರಿ ಶ್ರೀಗಳು ಮಣಿ ಹಾರ ಹಾಕಿ ಆಶೀರ್ವಾದಿಸಿದರು.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಕುಟುಂಬಸ್ಥರು ಸೇರಿದಂತೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಹುಲ್ ಗಾಂಧಿ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ, ವಿವಿಧ ಸಮುದಾಯದ ಮಠಾಧೀಶರು, ಉದ್ಯಮಿಗಳು, ರಾಜಕೀಯ ಗಣ್ಯರು, ಕ್ರೀಡಾಪಟುಗಳು, ಚಲನಚಿತ್ರ ಕಲಾವರಿದರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









Comments 1