ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಬಂಧನಕ್ಕಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ರಾಜ್ಯ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ಸಹ ಹುಟುಕಾಟ ನಡೆಸಿತ್ತು. ತಲೆ ಮರೆಸಿಕೊಂಡಿದ್ದ ಇವರನ್ನು ಸಿಸಿಬಿ ಪೊಲೀಸರು ಕಡೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್’ವೊಂದಕ್ಕೆ ಸಂಬಂಧಿಸಿದಂತೆ ಆ.11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ 300ಕ್ಕೂ ಅಧಿಕ ಮಂದಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈ ವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು.










Discussion about this post