ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸೇರಿದಂತೆ ರಾಜ್ಯ ಹಲವು ಕಡೆಗಳಲ್ಲಿ ಇಎಸ್’ಐ ಆಸ್ಪತ್ರೆ #ESI hospital ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ #State Budget ಭಾಷಣದಲ್ಲಿ ಘೋಷಣೆ ಮಾಡಿರುವ ಅವರು,ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್’ನಲ್ಲಿ ಇಎಸ್’ಐ ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ತಿಳಿಸಿದ್ದಾರೆ.
ಇನ್ನು, ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ಬಜೆಟ್’ನಲ್ಲಿ ಘೋಷಣೆ ಮಾಡಲಾಗಿದೆ.
ಇನ್ನಷ್ಟು ಹೈಲೆಟ್ಸ್:
ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲು
ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭ
ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂಪಾಯಿ ಮೀಸಲು
ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಪುನಶ್ಚೇತನ ಕೇಂದ್ರ ಆರಂಭ
18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ವಿತರಣೆ
ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ
ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















