No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

kalpa News by kalpa News
April 10, 2026
in ಬೆಂಗಳೂರು ನಗರ
0
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಷ್ಟ್ರೋತ್ಥಾನ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷರು ಹಾಗೂ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಸಂಪಾದಕರಾಗಿದ್ದ ನಾಡೋಜ ಡಾ. ಎಸ್‌ ಆರ್‌ ರಾಮಸ್ವಾಮಿಗಳವರು S R Ramaswamy (88 ವರ್ಷಗಳು) ಈ ಬೆಳಗ್ಗೆ (ಏ.10) ತಮ್ಮ ಇಹಲೋಕದ ಯಾತ್ರೆಯನ್ನು ಮುಗಿಸಿರುತ್ತಾರೆ. ರಾಮಸ್ವಾಮಿಯವರು ಶಂಕರಪುರಂನ ರಂಗರಾವ್ ರಸ್ತೆಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ತುಂಬು ಜೀವನ ನಡೆಸಿ, ಅಗಲಿರುವ ಆತ್ಮಕ್ಕೆ ಭಾವಪೂರ್ಣ ಶ್ರದ್ಧಾಂಜಲಿಗಳು.
ಏ. 10ರ ಈ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00ರ ವರೆಗೆ ರಾಷ್ಟ್ರೋತ್ಥಾನದ ಕೇಂದ್ರ ಕಚೇರಿ, ಕೇಶವಶಿಲ್ಪದಲ್ಲಿ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದರು.
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿರುವ ಅವರು ಸಾವಿರಾರು ಲೇಖನ ಬರೆದಿದ್ದಾರೆ. ಐದು ದಶಕಗಳ ಸಾಹಿತ್ಯ ಮತ್ತು ಪತ್ರಿಕೋದ್ಯಮ ಜೀವನದ ನಡುವೆ ಸ್ವದೇಶಿ ಚಳುವಳಿಯ ಬಲವಾದ ಪ್ರತಿಪಾದಕರೂ ಹೌದು. ಡಿ.ವಿ.ಗುಂಡಪ್ಪ ಮತ್ತಿತರ ಶ್ರೇಷ್ಠ ಚಿಂತಕರ ಒಡನಾಟ ಇವರಿಗೆ ಲಭಿಸಿತ್ತು. ಡಿ.ವಿ.ಜಿ. ಅವರೊಂದಿಗೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ ಅವರು, ಡಿವಿಜಿಯವರ ಅತ್ಯಮೂಲ್ಯ ಗ್ರಂಥವಾದ ’ಜೀವನಧರ್ಮಯೋಗ’ ಸೇರಿದಂತೆ ಅನೇಕ ಗ್ರಂಥಗಳ ಪ್ರಕಾಶನಕ್ಕೆ ಬಹುಮುಖವಾಗಿ ಶ್ರಮಿಸಿದವರು. ಇವರು ಬರೆದ ’ಶತಮಾನದ ತಿರುವಿನಲ್ಲಿ ಭಾರತ’ ಕೃತಿಗೆ 1992ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2006ರಲ್ಲಿ ‘ಆರ್ಯಭಟ’ ಪ್ರಶಸ್ತಿ, 2008ರಲ್ಲಿ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2009ರಲ್ಲಿ ಮಿಥಿಕ್ ಸೊಸೈಟಿ ಶತಮಾನದ ಪ್ರಶಸ್ತಿ, 2011ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ, 2011ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ವರ್ಷದವ್ಯಕ್ತಿ’ ಪ್ರಶಸ್ತಿ, ಮೈಸೂರಿನ ಡಿವಿಜಿ ಬಳಗದಿಂದ ‘ಡಿವಿಜಿ ಪ್ರಶಸ್ತಿ’ ಹಾಗೂ 2015ರಲ್ಲಿ ಹಂಪಿ ವಿಶ್ವವಿದ್ಯಾನಿಲಯದಿಂದ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿಗಳಿಂದ ರಾಮಸ್ವಾಮಿ ಅವರು ಪುರಸ್ಕೃತರಾಗಿದ್ದಾರೆ.ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಪಾತ್ರವಾಗಿದ್ದರು.

ಮಾಹಿತಿ: ರಾಘವೇಂದ್ರ ಅಡಿಗ ಎಚ್ಚೆನ್.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaS R Ramaswamyನಾಡೋಜ ಡಾ. ಎಸ್‌ ಆರ್‌ ರಾಮಸ್ವಾಮಿಬೆಂಗಳೂರು
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

Next Post

ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

kalpa News

kalpa News

Next Post
ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL