ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Also Read>> ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ: ಅಧ್ಯಕ್ಷ ಗಾದಿಗೆ ಭಾನುಪ್ರಕಾಶ್ ಶರ್ಮಾ ನಾಮಪತ್ರ ಸಲ್ಲಿಕೆ
ಕ್ಯಾನ್ಸರ್ ಸಮಸ್ಯೆಗೆ ಶಿವಣ್ಣ ಅಮೆರಿಕಾದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗುಣಮುಖರಾದ ಬೆನ್ನಲ್ಲೇ ಗೀತಾ ಶಿವರಾಜಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಏನಾಯ್ತು ಗೀತಕ್ಕಗೆ?
ಗೀತಾ ಶಿವರಾಜಕುಮಾರ್ ಅವರು ಕತ್ತಿನ ಭಾಗದ ಶಸ್ತçಚಿಕಿತ್ಸೆಗೆ ಒಳಗಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವರದಿಯಾಗಿದೆ.
ಗೀತಾ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದು, ಈ ಮೊದಲೇ ಅವರು ಇದಕ್ಕೆ ಶಸ್ತçಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.
ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post