ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಂತ್ರಿಮಾಲ್ ಕಟ್ಟಡ ಒಡೆಯದಿರಲು ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.
ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡವನ್ನು ತೆರವು ಮಾಡಬೇಕೆಂದು ಸಕ್ಷಮ ಪ್ರಾಧಿಕಾರ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ಮಂತ್ರಿಗ್ರೀನ್ ಅಪಾರ್ಟ್‌ಮೆಂಟ್ ತೆರವು ಮಾಡಲು ಬಿಬಿಎಂಪಿ ಹಾಗೂ ಸರ್ವೆ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿದ ಸಂದರ್ಭದಲ್ಲಿ 4 ಎಕರೆ ಒತ್ತುವರಿಯಾಗಿರುವುದು ಸಾಬೀತಾಗಿತ್ತು.
ಈ ಜಾಗದಲ್ಲಿರುವ ಕಟ್ಟಡಗಳನ್ನು ತೆರವು ಮಾಡಲು ಮಾರ್ಕಿಂಗ್ ಮಾಡಲಾಗಿತ್ತು. ಇದರ ವಿರುದ್ಧ ಅಪಾರ್ಟ್’ಮೆಂಟ್ ನಿವಾಸಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಕಟ್ಟಡ ಒಡೆಯದಂತೆ ತಡೆಯಾಜ್ಞೆ ನೀಡಿದೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post