ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪತಿ ನಿರಂತರವಾಗಿ ಕಿರುಕುಳದಿಂದ ಬೇಸತ್ತ ಪತ್ನಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಏನಿದು ಘಟನೆ?
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ.
ಪ್ರಿಯಾ ಹಾಗೂ ಆಕೆಯ ಪತಿ ನಿಕ್ಸನ್ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ 7 ವರ್ಷವಾದರೂ ಮಕ್ಕಳಾಗಿಲ್ಲ ಎಂಬ ಕಾರಣದಿಂದ ಪತಿಯು ಪ್ರತಿನಿತ್ಯ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ ದಂಪತಿಗೆ ಹೆಣ್ಣು ಮಗು ಆಗಿತ್ತು.
ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಆಕೆಯ ಬೆನ್ನುಮೂಳೆ ಹಾಗೂ ಎರಡು ಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿವೆ. ಸದ್ಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಪತಿಯ ವಿರುದ್ಧ ಬಾಣವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post