ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಿರಿಯ ನೃತ್ಯ ಕಲಾವಿದರ (Junior Dance Festival) ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ (Bengaluru) ಬೆಂಗಳೂರು ನೃತ್ಯ ದಿಶಾ ಟ್ರಸ್ಟ್ ವತಿಯಿಂದ ‘ನೃತ್ಯ ನೀರಾಜನ–14’ ನೃತ್ಯೋತ್ಸವವನ್ನು ಆಯೋಜಿಸಲಾಗಿದೆ.
‘ನೃತ್ಯ ಪ್ರಭಾ – ಕಾಂತಿಯುತ ನೃತ್ಯ ತೇಜಸ್ಸು’ ಎಂಬ ಶೀರ್ಷಿಕೆಯಡಿ ನಡೆಯಲಿರುವ ಈ ಕಿರಿಯರ ನೃತ್ಯೋತ್ಸವವು ಸೆಪ್ಟೆಂಬರ್ 27ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ನೃತ್ಯ ದಿಶಾ ಟ್ರಸ್ಟ್ನ ಗುರು ಡಾ. ದರ್ಶಿನಿ ಮಂಜುನಾಥ್ ಅವರ ಶಿಷ್ಯೆಯರಾದ ಕು. ಜಯಶ್ರೀ ವೇಣು ಕುಲಾವಿ, ಕು. ಪಿ. ಲಿಖಿತಾ ಹಾಗೂ ಕು. ಆರ್. ಸಮೃದ್ಧಿ ಅವರು ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ. ಶಾಸ್ತ್ರೀಯ ನೃತ್ಯದ ವಿವಿಧ ಆಯಾಮಗಳನ್ನು ತಮ್ಮ ಕಲಾ ಪ್ರದರ್ಶನದ ಮೂಲಕ ಅನಾವರಣಗೊಳಿಸಲು ಕಿರಿಯ ಕಲಾವಿದರು ಸಜ್ಜಾಗಿದ್ದಾರೆ.
Also read>> SWR Vigilance Dept Organizes Inter-School Competitions to Promote Integrity & Ethical Values
Bengaluru : ಕಿರಿಯ ಕಲಾವಿದರಿಗೆ ಪ್ರೋತ್ಸಾಹ
ಕಾರ್ಯಕ್ರಮಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಆರ್. ರಜನಿ ಹಾಗೂ ಸಾಧನಾ ಸಂಗಮ ಡ್ಯಾನ್ಸ್ ಸೆಂಟರ್ನ ಕಲಾ ನಿರ್ದೇಶಕಿ ಮತ್ತು ಆರೋಗ್ಯವರ್ಧಿನಿ ಆಯುರ್ವೇದಾಲಯದ ಆಯುರ್ವೇದ ವೈದ್ಯೆ ಡಾ. ಪಿ. ಸಾಧನಾಶ್ರೀ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳು ಕಿರಿಯ ಕಲಾವಿದರ ನೃತ್ಯ ಪ್ರದರ್ಶನವನ್ನು ವೀಕ್ಷಿಸಿ, ಅವರ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸಲಿದ್ದಾರೆ.
ಕಿರಿಯ ವಯಸ್ಸಿನಲ್ಲಿಯೇ ಶಾಸ್ತ್ರೀಯ ನೃತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿರುವ ಪ್ರತಿಭಾವಂತ ಕಲಾವಿದರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ವೇದಿಕೆ ಒದಗಿಸುವುದು ‘ನೃತ್ಯ ನೀರಾಜನ–14’ರ ಪ್ರಮುಖ ಉದ್ದೇಶವಾಗಿದೆ. ಇಂತಹ ಕಾರ್ಯಕ್ರಮಗಳು ಕಿರಿಯ ಕಲಾವಿದರಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜತೆಗೆ, ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗಲಿವೆ.
ಕಿರಿಯ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ, ಅವರ ನೃತ್ಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನೃತ್ಯೋತ್ಸವವನ್ನು ಆಯೋಜಿಸಲಾಗಿದೆ ಎಂದು ನೃತ್ಯ ದಿಶಾ ಟ್ರಸ್ಟ್ ವತಿಯಿಂದ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








