ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆತ್ಮೀಯ ಸ್ನೇಹಿತರು ಸಂಪುಟ ಸಹೋದ್ಯೋಗಿ ಡಿ. ಸುಧಾಕರ್ D Sudhakar ಅವರು ಅಲ್ಪಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಆದರೆ ಅವರೊಂದಿಗಿನ ನೆನಪುಗಳು ಅಮರ. ಸಾರ್ವಜನಿಕ ಸೇವೆಯಲ್ಲಿ ಅವರು ತೋರುತ್ತಿದ್ದ ನಿಷ್ಟೆ ಸರಳತೆ ಮತ್ತು ಸಾಮಾಜಿಕ ಕಳಕಳಿ ಅನನ್ಯವಾದುದು. ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಚಿವ ಮಧುಬಂಗಾರಪ್ಪ Minister Madhu Bangarappa ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















