ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ 24 ಗಂಟೆಯೊಳಗಾಗಿಯೇ ಸುರೇಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಅವರು, ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















