ವಿವಾದಕ್ಕೆ ಕಾರಣವಾಗಿರುವ ಇಲ್ಲಿನ ಚಾಮರಾಜಪೇಟೆ ಈದ್ಗಾ ಮೈದಾನವು ಆಟದ ಮೈದಾನವಾಗಿದ್ದು, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದು ವಿಶೇಷ ಆಯುಕ್ತ ಹರೀಶ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದು ಬಿಬಿಎಂಪಿಗೆ ಸೇರಿದ ಆಸ್ತಿಯಾಗಿದ್ದು, ಆಟದ ಮೈದಾನವಾಗಿದೆ. ಈದ್ಗಾ ಮೈದಾನವಲ್ಲ ಎಂದಿದ್ದಾರೆ. ನ್ಯಾಯಾಲಯದ ನಿರ್ದೇಶನದ ಪ್ರಕಾರ ವರ್ಷದಲ್ಲಿ 2 ಬಾರಿ ಪ್ರಾರ್ಥನೆಗೆ ಅವಕಾಶ ಕೊಡಲಾಗುತ್ತಿದ್ದು, ನೀಡಿರುವ 2 ಅವಧಿ ಬಿಟ್ಟು ಅವಕಾಶ ಕೇಳಿದ್ದರೆ ಬೇರೆ ಚಟುವಟಿಕೆಗೆ ಅವಕಾಶ ಕೊಡಲಾಗುತ್ತದೆ. ಆದರೆ ಕೋಮು ಸೌಹಾರ್ದತೆ ಹಾಳಾಗುವ ವಿಚಾರ ಹಾಗೂ ಕಾನೂನು ವಿಚಾರ ತೊಂದರೆ ಆದರೆ ಕೂಡಲೇ ಪೊಲೀಸ್ ಮೊರೆ ಹೋಗುತ್ತೇವೆ ಎಂದಿದ್ದಾರೆ. ಇನ್ನು, ಈ ಕುರಿತಂತೆ ಪ್ರತಿಭಟನೆ ನಡೆಸಿರುವ ಕನ್ನಡ ಸಂಘಟನೆಯ ಮುಖಂಡರು, ಚಾಮರಾಜಪೇಟೆಯ ಮೈದಾನ ಸಾರ್ವಜನಿಕರ ಆಸ್ತಿ. ಆದರೆ ಒಂದೇ ಸಮುದಾಯಕ್ಕೆ ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟು, ನಮಗೇಕೆ ತಾರತಮ್ಯ ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದರು. ಇದರಿಂದ ಮುಂಜಾಗ್ರತಾ ಕ್ರಮವಾಗಿ ಮೈದಾನದ ಸುತ್ತಲು ಪೊಲೀಸರ ಭದ್ರತೆ ಹೆಚ್ಚಿಸಲಾಗಿತ್ತು.
Discussion about this post