No Result
View All Result
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ
English Articles

Pure Gold Within the Uniform: Jayakara Airody, The Great Voice of Humanity

by ಕಲ್ಪ ನ್ಯೂಸ್
May 9, 2026
0

Kalpa Media House  |  Special Article  | Some are born into wealth, but a rare few earn true richness through...

Read moreDetails
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ವಿಶೇಷ ಆದ್ಯತೆ ನೀಡೋಣ | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಆಶಯ

ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಆರಂಭ | ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿ ಧಾಮದಲ್ಲಿ ಶ್ರೀ ಭಂಡಾರಕೇರಿ ಮಠ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2024
in ಬೆಂಗಳೂರು ನಗರ
0
ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ವಿಶೇಷ ಆದ್ಯತೆ ನೀಡೋಣ | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಆಶಯ

ಉಡುಪಿ ಶ್ರೀ ಭಂಡಾರಕೇರಿ ಮಠ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉಡುಪಿ #Udupi ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ರಾಜಧಾನಿಯ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ #VedavyasaJayanti ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು , (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.
ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ #DasaSahityaProject ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ- ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್, ಮತ್ತು ಬಂಡಿ ಶ್ಯಾಮಾಚಾರ್ಯ ಭಾಗವಹಿಸಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

Also read: ಲೋಕಸಭಾ ಚುನಾವಣೆ | ಮೋದಿ ಅವರು ಈಗಾಗಲೇ ಬಹುಮತ ಪಡೆದಿದ್ದಾರೆ | ಅಮಿತ್ ಶಾ ವಿಶ್ವಾಸ

ಮೇ 16ರ ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

17ರಂದು ಬೆಳಗ್ಗೆ 9ರಿಂದ 12 – ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
18ರಂದು ವರ್ಧಂತಿ ಮಹೋತ್ಸವ:
ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ( ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ:
ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ
ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವುವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ:
20ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Bandarakere MuttBENGALURUDasa Sahitya ProjectKannada News WebsiteLatest News Kannadamysoreಉಡುಪಿಬೆಂಗಳೂರುಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ಮಾಧ್ವ ರಾದ್ಧಾಂತ ಸಂವರ್ಧಕ ಸಭಾವಿದ್ಯಾಮಾನ್ಯ ತೀರ್ಥರವೇದವ್ಯಾಸ ಜಯಂತಿಶ್ರೀ ಭಂಡಾರಕೇರಿ ಮಠ
Share196Tweet123Send
Previous Post

ಅಸಾಧ್ಯವನ್ನು ಸಾಧಿಸಿ ತೋರಿಸಿದ್ದಾರೆ | ಮೋದಿಯನ್ನು ಹಾಡಿ ಹೊಗಳಿದ ನಟಿ ರಶ್ಮಿಕಾ ಮಂದಣ್ಣ

Next Post

ಮೂವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ | ಬೆಂಗಳೂರಿನಲ್ಲಿ 20 ರಂದು ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೂವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ | ಬೆಂಗಳೂರಿನಲ್ಲಿ 20 ರಂದು ಪ್ರದಾನ

ಮೂವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ | ಬೆಂಗಳೂರಿನಲ್ಲಿ 20 ರಂದು ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
ಕೆರೆ ಏರಿ ಮಲೆ ಮದುವೆ ದಿಬ್ಬಣದ ಬಸ್ ಪಲ್ಟಿ | ತಪ್ಪಿದ ಬಾರಿ ಅನಾಹುತ

ಕೆರೆ ಏರಿ ಮಲೆ ಮದುವೆ ದಿಬ್ಬಣದ ಬಸ್ ಪಲ್ಟಿ | ತಪ್ಪಿದ ಬಾರಿ ಅನಾಹುತ

May 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

May 9, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL