ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ `ಮಧ್ವ ವಿಜಯ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ವಿಶ್ವ ಮಧ್ವಮತ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಗಾಂಧಿ ಬಜಾರ್ ಶ್ರೀ ವ್ಯಾಸರಾಜ ಮಠದಲ್ಲಿ ಆಯೋಜಿಸಲಾಗಿದ್ದ 5ನೇ ವರ್ಷದ ಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೋಲಾರ ಜಿಲ್ಲೆ ತಂಬಿಹಳ್ಳಿ ಶ್ರೀ ಮಾಧವತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.
ಧರ್ಮಶಾಸ್ತ್ರ ಅಧ್ಯಯನಕ್ಕಾಗಿ ಅನೇಕಲ್’ನ ಕೆ.ವಿ. ಲಕ್ಷ್ಮಿನಾರಾಯಣಾಚಾರ್ಯ, ಲೆಕ್ಕ ಪರಿಶೋಧಕ ಸಿಎ ಸಿ.ಆರ್. ಮುರಳಿ, ವಿದ್ವಾನ್ ಶ್ರೀನಿಧಿ ಆಚಾರ್ಯ ಉತ್ತನೂರು ಮತ್ತು ವಿದ್ವಾನ್ ಸುಘೋಷಾಚಾರ್ಯ ಅವರುಗಳಿಗೆ ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಶ್ರೀಮಧ್ವ ಜಯಂತಿಯ ಪರ್ವಕಾಲದಲ್ಲಿ ಬಸವನಗುಡಿ ನವಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದವರೆಗೆ ಬೃಹತ್ ಶೋಭಾಯಾತ್ರೆ ನಡೆಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಡಾ.ಜಿ. ನಾಗೇಂದ್ರ, ವಿಎಂಡಬ್ಲ್ಯೂಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ವೆಂಕೋಬ ರಾವ್, ರಾಷ್ಟ್ರೀಯ ಅಧ್ಯಕ್ಷ, ರಾಘವೇಂದ್ರ ಪ್ರಸಾದ್ ಕೋಟಿ ಮತ್ತು ರಾಜ್ಯಾಧ್ಯಕ್ಷ ಶ್ರೀನಿವಾಸ ಜೋಷಿ ಮೊದಲಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post