No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರಿನ ಬಸವನಗುಡಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮ

kalpa News by kalpa News
May 11, 2022
in ರಾಜಕೀಯ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ.

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮನವಿ ಮಾಡಿದರು.

ಈಗಾಗಲೇ ಎರಡು ಬಾರಿ ನಾನು ನಮ್ಮ ತಂದೆ-ತಾಯಿಗಳ ಪುಣ್ಯದಿಂದ ಮುಖ್ಯಮಂತ್ರಿ ಆಗಿದ್ದೇನೆ. ಮತ್ತೆ ಸಿಎಂ ಆಗಬೇಕು ಅನ್ನೋದು ಮುಖ್ಯ ಅಲ್ಲ. ಇಂದು ಬೆಳಗ್ಗೆ ಒಂದು ಚಾನಲ್ʼನಲ್ಲಿ ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆಯನ್ನು ನೋಡಿದ್ದೇನೆ. ಮಹಾಲಕ್ಷ್ಮಿ ಲೇಔಟ್ʼನಲ್ಲಿ ಖಾಸಗಿ ಶಾಲೆಯ ಅವ್ಯವಸ್ಥೆಯನ್ನು ಆ ವಾಹಿನಿ ಹೊರಗಿಟ್ಟಿದೆ. ಹಲವಾರು ಶಾಲೆಗಳಲ್ಲಿ ಇಂತಾ ವ್ಯವಸ್ಥೆ ಇದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Also Read: ಸಂಪುಟ ವಿಸ್ತರಣೆ-ಯಾವಾಗ ಏನು ಬೇಕಾದರೂ ಆಗಬಹುದು: ಕುತೂಹಲ ಮೂಡಿಸಿದ ಸಿಎಂ ಹೇಳಿಕೆ

ಇಂಥ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕೇ ಹೊರತು ಸಮಾಜವನ್ನು ಒಡೆಯಲು ಅಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ಇಂಥ ಸಮಸ್ಯೆಗಳನ್ನು ಗಮನಿಸಿಯೇ ನಾನು ಪಂಚತಂತ್ರ ಕಾರ್ಯಕ್ರಮಗಳಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇನೆ. ಕೂಡಲೇ ಆ ಶಾಲೆಯ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೇನೆ ಎಂದರು ಅವರು.
ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣಗೆ ಸವಾಲು
ತಾಕತ್ತು ಇದ್ದರೆ ಸಚಿವ ಡಾ.ಅಶ್ವತ್ಥನಾರಾಯಣ ಅವರು ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ ಎಂದು ಇದೇ ವೇಳೆ ನೇರ ಸವಾಲು ಹಾಕಿದರು.

ನನ್ನ ವಿರುದ್ಧ ಏನೇ ದಾಖಲೆ ಇದ್ದರೂ ಬಿಡುಗಡೆ ಮಾಡಲಿ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಅವರ ರೀತಿ ಲೂಟಿ ಹೊಡೆದಿಲ್ಲ. ಲೂಟಿ ಮಾಡ್ತಿರುವವರು ಅವರು. ಅವರಿಗೆ ತಾಕತ್ತು ಇದ್ದರೆ ನಾಳೆ ಬೆಳಗ್ಗೆಯೇ ನನ್ನ ವಿರುದ್ಧದ ದಾಖಲೆ ಬಿಡುಗಡೆ ‌ಮಾಡಲಿ ಎಂದು ಸವಾಲು ಹಾಕಿದರು.

Also Read: ಭದ್ರಾವತಿ: ಸಿದ್ಧಾರೂಢ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

“ಪ್ರಾಧ್ಯಾಪಕರ ನೇಮಕಾತಿಯಲ್ಲಿ 450 ಕೋಟಿ ಅಕ್ರಮ ಆಗಿದೆ. ನೀವು ನನ್ನ ಬಗ್ಗೆ ಮಾತನಾಡಿದರೆ ಹುಷಾರ್, ನನ್ನ ಬಳಿ ಇರುವ ದಾಖಲೆಗಳು ನಿಮ್ಮ ಬಳಿಯೂ ಇಲ್ಲ. ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಿ” ಎಂದು ಸಚಿವರಿಗೆ ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ಕೊಟ್ಟರು.
ರವೀಂದ್ರನಾಥ್ ರಾಜೀನಾಮೆ ಅಂಗೀಕಾರ ಬೇಡ
ಐಪಿಎಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆಯನ್ನು ಸರ್ಕಾರ ಅಂಗೀಕಾರ ಮಾಡಬಾರದು. ಸರ್ಕಾರದ ನಡವಳಿಕೆ ಖಂಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಅನೇಕ ಜನ ನಕಲಿ ಮೀಸಲಾತಿ ಸರ್ಟಿಫಿಕೇಟ್ ಪಡೆದಿದ್ದರು. ಇದನ್ನು ತನಿಖೆ ಮಾಡಲು ಹೋದರೆ ವರ್ಗಾವಣೆ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಬಗ್ಗೆ ಸಿದ್ದರಾಮಯ್ಯ ಅಧಿವೇಶನದಲ್ಲಿ ಭಾಷಣ ಮಾಡಿದ್ದರು. ಸಿದ್ದರಾಮಯ್ಯ ಅವಧಿಯಲ್ಲಿ ನಕಲಿ ದಾಖಲಾತಿ ಕೊಟ್ಟು ಪೊಲೀಸ್ ಅಧಿಕಾರಿಯಾಗಿದ್ದ ಕೆಂಪಯ್ಯ ಆಯಕಟ್ಟಿನ ಅಧಿಕಾರ ಪಡೆದಿದ್ದರು. ಅಂತಹವರಿಗೆ ಪೊಲೀಸ್ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದರು. ಸಿದ್ದರಾಮಯ್ಯಗೆ ಈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಕೆಂಪಯ್ಯಗೆ ನೊಟೀಸ್ ಕೊಟ್ಟ ಎರಡು ದಿನಕ್ಕೆ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕಾಂಗ್ರೆಸ್-ಬಿಜೆಪಿ ಶಾಮೀಲಾಗಿವೆ. ಇದರಲ್ಲಿ ಯಾರು ಎ ಟೀಂ ಮತ್ತು ಯಾರು ಬಿ ಟೀಂ ಅಂತ ಗೊತ್ತಾಗುತ್ತದೆ. ಅಧಿಕಾರಿಯನ್ನು ವರ್ಗಾವಣೆ ಯಾಕೆ ಮಾಡಿದಿರಿ? ಸಿದ್ದರಾಮಯ್ಯ ಹೇಳಿದ್ದಕ್ಕೆ‌ ಮಾಡಿದಿರಾ? ಅವರು ಮಾತೆತ್ತಿದರೆ ದಲಿತರು, ಹಿಂದುಳಿದವರ ಬಗ್ಗೆ ಮಾತಾಡುತ್ತಾರೆ. ಆದರೆ, ಅವರಿಗೆ ಸಿಗಬೇಕಾದ ಸೌಲಭ್ಯದಲ್ಲಿ ಅನ್ಯಾಯ ಆಗುತ್ತಿದೆ. ಅದನ್ನು ಸರಿ ಮಾಡಲು ಹೋದರೆ ಅಧಿಕಾರಿಯನ್ನೇ ವರ್ಗವಣೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಕಿಡಿ ಕಾರಿದರು.

ಈ ಸರಕಾರದಲ್ಲಿ ದಲಿತರಿಗೆ ಮತ್ತು ದಲಿತ ಅಧಿಕಾರಿಗಳಿಗೆ ಎಲ್ಲಿದೆ ರಕ್ಷಣೆ? ಅವರು ಕೇಳಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUH D Kumara SwamyJanata JaladhareKannada News WebsiteKarnataka politicsLatest News KannadaPolitical Newsಎಚ್.ಡಿ. ಕುಮಾರಸ್ವಾಮಿಗವಿಗಂಗಾಧರ ಸ್ವಾಮಿ ದೇವಸ್ಥಾನಜನತಾ ಜಲಧಾರೆಧರ್ಮಬೆಂಗಳೂರು
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಪುಟ ವಿಸ್ತರಣೆ-ಯಾವಾಗ ಏನು ಬೇಕಾದರೂ ಆಗಬಹುದು: ಕುತೂಹಲ ಮೂಡಿಸಿದ ಸಿಎಂ ಹೇಳಿಕೆ

Next Post

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

kalpa News

kalpa News

Next Post
ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL