ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, #Government First Grade College ಇಂಜಿನಿಯರಿಂಗ್ ಕಾಲೇಜುಗಳು, #College of Engineering ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ #UVCE University ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದ್ದಾರೆ.
ಈ ಕುರಿತಂತೆ ಬಜೆಟ್ #State Budget ಭಾಷಣದಲ್ಲಿ ಉಲ್ಲೇಖಿಸಿರುವ ಅವರು, ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ.
ಅಲ್ಲದೇ, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುz್ದÉಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದಿದ್ದಾರೆ.
ಬಜೆಟ್’ನಲ್ಲಿ ಉನ್ನತ ಶಿಕ್ಷಣಕ್ಕೆ ದೊರೆತಿದ್ದು…
- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪನೆ
- ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ. ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ
- ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ
- 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು

- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು
- ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪನೆ
- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ
- ಸರ್ಕಾರದ 11 ಪಾಲಿಟೆಕ್ನಿಕ್ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ಗಳನ್ನು ಪ್ರಾರಂಭ
- AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿ
- ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿಯೂ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು

- ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು
- ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿ
- ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ, ಹೆಸರಘಟ್ಟ ಇಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು
- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ
- ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ
- ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪನೆ
- ಕರ್ನಾಟಕದಲ್ಲಿ NCC ಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 NCC ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ
- ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








