ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ನಿರ್ಮಿಸಿರುವ ಹೆರಿಗೆ ವಾರ್ಡ್ ಕಟ್ಟಡವನ್ನು ಸಚಿವರಾದ ಡಾ.ಕೆ. ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎನ್. ನಾಗರಾಜು ಅವರುಗಳು ಜಂಟಿಯಾಗಿ ಉದ್ಘಾಟಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್, ಹೊಸಕೋಟೆ ತಹಶಿಲ್ದಾರ್ ಮಹೇಶ್ ಮತ್ತಿತ್ತರರು ಉಪಸ್ಥಿತರಿದ್ದರು.









Discussion about this post