ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ Second PUC Result ಗುರುವಾರ ಪ್ರಕಟವಾಗಿದೆ. ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದ್ದು, ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ Alvas College ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















