ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ SSLC Result ಫಲಿತಾಂಶಗಳು ಇಂದು ಪ್ರಕಟವಾಗಿದ್ದು, ಶೇ. 94.10ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ Minister Madhu Bangarappa ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿಂದು ಮಾಹಿತಿ ನೀಡಿದ ಅವರು, ಏಳು ವಿದ್ಯಾರ್ಥಿಗಳು ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರೂಪಾ, ಜಾಹ್ನವಿ, ಉತ್ಸವ್ ಪಾಟೀಲ್ ಸೇರಿದಂತೆ ಏಳು ಜನ 625ಕ್ಕೆ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಮಾ.18 ರಿಂದ ಏ.2 ರವರೆಗೆ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8.65 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. 7,24,794 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ತೃತೀಯ ಸ್ಥಾನ ಲಭಿಸಿದೆ ಎಂದರು.
ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು karresults.nic.in, kseab.karnataka.gov.in, ಮತ್ತು sslc.karnataka.gov.in ಸೇರಿದಂತೆ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















