ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಾಹಿತ್ಯ ಪರಿಷತ್ ವತಿಯಿಂದ “ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ–2026” ಆಯೋಜಿಸಲಾಗಿದೆ.
“ವೈದ್ಯಲೋಕ” ಆರೋಗ್ಯ ಮಾಸಪತ್ರಿಕೆ ಹಾಗೂ ಮೀಡಿಯಾ ಐಕಾನ್ ಸಂಸ್ಥೆಗಳು ಈ ಸ್ಪರ್ಧೆಗೆ ಸಹಯೋಗ ನೀಡುತ್ತಿವೆ.
ಸಾಹಿತ್ಯದ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಹಾಗೂ ಸ್ವಾಸ್ಥ್ಯದ ಬಗ್ಗೆ ಅರಿವು ಮೂಡಿಸಿ, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಈ ಸ್ಪರ್ಧೆ ವೇದಿಕೆ ಒದಗಿಸುತ್ತದೆ. ಆಯ್ದ ಬರಹಗಳು “ವೈದ್ಯಲೋಕ” ಮಾಸಪತ್ರಿಕೆ ಮತ್ತು ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ವಿಜೇತರಿಗೆ ಪ್ರಶಸ್ತಿ, ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ.
ಸ್ಪರ್ಧೆಯನ್ನು ಸಾರ್ವಜನಿಕರು, ವೈದ್ಯರು ಮತ್ತು ಆರೋಗ್ಯ ವೃತ್ತಿಪರರು, ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಎಂಬ ಮೂರು ವಿಭಾಗಗಳಲ್ಲಿ ಆಯೋಜಿಸಲಾಗಿದೆ.
Also read: ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ
ಸ್ಪರ್ಧೆಯನ್ನು ಮೂರು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಅವುಗಳೆಂದರೆ:
ಸಾರ್ವಜನಿಕರು
ವೈದ್ಯರು ಮತ್ತು ಆರೋಗ್ಯ ವೃತ್ತಿಪರರು
ವೈದ್ಯಕೀಯ ವಿದ್ಯಾರ್ಥಿಗಳು
ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಅವಕಾಶ ದೊರೆಯಲಿದೆ. ಆಯ್ಕೆಯಾದ ಬರಹಗಳು “ವೈದ್ಯಲೋಕ” ಮಾಸಪತ್ರಿಕೆ ಮತ್ತು ಅದರ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿವೆ. ಜೊತೆಗೆ, ಆರೋಗ್ಯ ವಿಷಯ ಲೇಖಕರಾಗಿ ಗುರುತಿಸಿಕೊಳ್ಳುವ ಅವಕಾಶವೂ ಸಿಗಲಿದೆ. ವಿಜೇತರಿಗೆ ಪ್ರಶಸ್ತಿ, ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ.
ಕವನ ಮತ್ತು ಕಥೆಗಳನ್ನು ಕಳುಹಿಸಲು ಕೊನೆಯ ದಿನಾಂಕ ಜೂನ್ 30, 2026 ಆಗಿದೆ.
ಆಸಕ್ತರು ತಮ್ಮ ಬರಹಗಳನ್ನು mediaicon@ymail.com ಇಮೇಲ್‌ಗೆ ಅಥವಾ 81975 54373 ವಾಟ್ಸಪ್ ಸಂಖ್ಯೆಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ಕೃಷ್ಣ ಎಂ (81975 54373) ಹಾಗೂ ಎನ್.ವಿ. ರಮೇಶ್ (98455 65238) ಅವರನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















