ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಕಿಂಗ್ ಸ್ಟಾರ್ ಯಶ್ #Rocking Star Yash ಅಭಿನಯದ ಟಾಕ್ಸಿಕ್ ಚಿತ್ರಕ್ಕೆ ಒಂದರ ಹಿಂದೆ ಒಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಲೇ ಇವೆ.
ಹೌದು… ಟಾಕ್ಸಿಕ್ #Toxic ಚಿತ್ರದ ಟ್ರೆಲರ್ ಬಿಡುಗಡೆಯಾದ ನಂತರ ಅದರಲ್ಲಿನ ಅಶ್ಲೀಲ ರೀತಿಯ ದೃಶ್ಯಗಳು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಚಿತ್ರದ ವಿರುದ್ದ ರಾಷ್ಟ್ರೀಯ ಕ್ರೈಸ್ತ ಒಕ್ಕೂಟ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದೆ.
ಸಿನಿಮಾದ ಟ್ರೈಲರ್’ನಲ್ಲಿರುವ ದೃಶ್ಯಗಳು ಮುಜುಗರ ಹಾಗೂ ಅವಮಾನಕರ ರೀತಿಯಲ್ಲಿವೆ. ಅಲ್ಲದೇ, ಈ ಸಿನಿಮಾ ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಚಿತ್ರದ ದೃಶ್ಯಗಳಲ್ಲಿ ಟ್ರೈಸ್ತರಿಗೆ ಮುಜುಗರ ತರಲಾಗಿದೆ. ಟಾಕ್ಸಿಕ್ ಸಿನಿಮಾದಲ್ಲಿ ಟ್ರೈಸ್ತರ ದೇವದೂತ ಸಂತ ಮಿಕಯೇಲ್’ಗೆ ಅಪಮಾನ ಮಾಡಲಾಗಿದೆ. ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಣ ಮಾಡಿದ್ದಾರೆ. ಹೀಗಾಗಿ ಯೂಟ್ಯೂಬ್ ಪೋಸ್ಟ್’ಗಳನ್ನ ತೆಗೆಯಬೇಕು. ಸಿನಿಮಾದಲ್ಲಿ ಚಿತ್ರೀಕರಣ ಮಾಡಿರುವ ದೃಶ್ಯಗಳನ್ನು ತೆಗೆಯುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಮನವಿ ಮಾಡಿದೆ.
ಚಿತ್ರತಂಡ ತಕ್ಷಣವೇ ಸಂತ ಮಿಕಯೇಲ್ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನು ತೆಗೆಯಬೇಕು. ಅಪಮಾನ ಮಾಡಿದ್ದಕ್ಕಾಗಿ ಕ್ರೈಸ್ತರಲ್ಲಿ ಕ್ಷಮೆ ಕೇಳಬೇಕು. ಒಂದು ವೇಳೆ ತೆಗೆಯದಿದ್ದರೆ, ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















