ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜಧಾನಿಯ ಸಾಯಿ ಆರ್ಟ್ಸ್ ಇಂಟರ್ನ್ಯಾಷನಲ್ ಸಂಸ್ಥೆಯ ನಿರ್ದೇಶಕಿ ಗುರು ಡಾ. ಸುಪರ್ಣಾ ವೆಂಕಟೇಶ ಅವರ ಶಿಷ್ಯೆ ಗ್ರಿಷಾ ಮಧುಗೌಡ ಅವರ ರಂಗ ಪ್ರವೇಶ ಕಾರ್ಯಕ್ರಮ ಆಗಸ್ಟ್ 9 ರಂದು ನೆರವೇರಲಿದೆ.
ಬೆಂಗಳೂರಿನ ಮಲ್ಲೇಶ್ವರದ ಚೌಡಯ್ಯ ಸ್ಮಾರಕ ಭವನದಲ್ಲಿ ಅಂದು ಸಂಜೆ 4:30ಕ್ಕೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.
ಮುಖ್ಯ ಅತಿಥಿಗಳಾಗಿ ಪ್ರಖ್ಯಾತ ಸಿನಿಮಾ ನಿರ್ದೇಶಕ ಪ್ರಶಾಂತ್ ನೀಲ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಡ್ಯಾನ್ಸ್ ಇಂಡಿಯಾ ಪತ್ರಿಕೆ ಸಂಪಾದಕ ಬಿ.ಆರ್. ವಿಕ್ರಂ ಕುಮಾರ್, ಮಾಜಿ ಶಾಸಕ ಜಿ.ಬಿ. ಶಿವಕುಮಾರ್, ಕೆಆರ್’ಇಡಿಎಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ. ಶಿವಲಿಂಗಯ್ಯ, ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎಂ. ಚಂದ್ರೇಗೌಡ, ವೈದ್ಯಕೀಯ ಕ್ಷೇತ್ರದ ಪ್ರಖ್ಯಾತ ತಜ್ಞರಾದ ಡಾ. ರಶ್ಮಿ ಕಿಶೋರ್, ಡಾ. ಸವಿತಾ ಮೋಹನ್ ಹಾಗೂ ಡಾ. ಕನಕಲಕ್ಷ್ಮಿ ಗೋಪಾಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಕಲಾವಿದರ ಸಹಕಾರ
ರಂಗಪ್ರವೇಶಕ್ಕೆ ನಟುವಾಂಗದಲ್ಲಿ ಗುರು ಸುಪರ್ಣಾ, ಗಾಯನದಲ್ಲಿ ವಿದುಷಿ ಹರ್ಷಿತಾ ವಿದ್ಯಾ, ಮೃದಂಗದಲ್ಲಿ ವಿದ್ವಾನ್ ಆನೂರು ವಿನೋದ್, ಕೊಳಲು ದೀಪಕ್ ಹೆಬ್ಬಾರ್, ಪಿಟೀಲು ವಿದ್ವಾನ್ ಪ್ರಾದೇಶ ಆಚಾರ್ಯ, ಸಹಕಾರ ನೀಡಲಿದ್ದಾರೆ.
ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಾಯಿ ಆರ್ಟ್ ಇಂಟರ್ನ್ಯಾಷನಲ್ ಸಂಸ್ಥೆ ತಾಂತ್ರಿಕ ನಿರ್ದೇಶಕ ಸಾಯಿ ವೆಂಕಟೇಶ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post