ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೌರತ್ವ ನಿಷೇಧ ಮಸೂದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ನಡೆಸಿದವರು ಹೊರ ರಾಜ್ಯದವರೇ ಹೊರತು ಬೆಂಗಳೂರಿಗರಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಕೆಲವು ಮಂದಿ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ ಕೇರಳ ಸೇರಿದಂತೆ ಹೊರರಾಜ್ಯದಿಂದ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಬುದ್ಧಿಜೀವಿಗಳು ಕಾನೂನನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದು ಮಾತ್ರವಲ್ಲ ಕೆಲವು ಕಡೆಗಳಲ್ಲಿ ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್’ಗಳನ್ನೂ ಸಹ ಹಾಕಲಾಗಿತ್ತು ಎಂದಿದ್ದಾರೆ.
ಪ್ರತಿಭಟನೆಯಲ್ಲಿ ಬೆಂಗಳೂರಿಗರು ಬೆರಳೆಣಿಕೆಯಷ್ಟಿದ್ದರು. ಬೆಂಗಳೂರು ನಿವಾಸಿಗಳಾದವರು ಇಂತಹ ಪ್ರತಿಭಟನೆಗೆ ಮುಂದಾಗಿಲ್ಲ. ಕಾನೂನನ್ನು ಪಾಲಿಸಲು ನಮಗೆ ಸಹಕರಿಸಿದ ಬೆಂಗಳೂರಿಗರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Get in Touch With Us info@kalpa.news Whatsapp: 9481252093
Discussion about this post