ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಈ ಬಾರಿಯ ಬಜೆಟ್’ನಲ್ಲಿ ಮೈಸೂರು ಕಾಗದ ಕಾರ್ಖಾನೆಯನ್ನು ಮರು ಆರಂಭಿಸಲು ಕನಿಷ್ಠ ಬಂಡವಾಳ ಘೋಷಣೆಯಾಗುತ್ತದೆ ಎಂಬ ನಿರೀಕ್ಷೆಯನ್ನು ಹುಸಿಗೊಳಿಸಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಅಮ್ ಅದ್ಮಿ ಪಕ್ಷ ಕಿಡಿ ಕಾರಿದೆ.
ಈ ಕುರಿತಂತೆ ಮಾತನಾಡಿರುವ ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಸುಮಾರು 5 ವರ್ಷಗಳಿಂದ ಸ್ಥಗಿತಗೊಂಡಿರುವ ಮೈಸೂರು ಕಾಗದ ಕಾರ್ಖಾನೆಗೆ ಈ ಬಾರಿ ಬಜೆಟ್‌ನಲ್ಲಿ ಕನಿಷ್ಠ ಬಂಡವಾಳ ಹೂಡುವ ಮೂಲಕ ಆರಂಭಿಸಬಹುದೆಂಬ ನಿರೀಕ್ಷೆಯನ್ನು ಕಾರ್ಮಿಕ ಕುಟುಂಬಗಳು ಹೊಂದಿದ್ದವು. ಆದರೆ ನಿರೀಕ್ಷೆ ಹುಸಿಯಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸುವ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಅದರಲ್ಲೂ ಯುವ ಸಮುದಾಯದ ಪಾಲಿಗೆ ಈ ಬಾರಿ ಬಜೆಟ್ ನಿರಾಶದಾಯಕ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.
ಕಾರ್ಖಾನೆ ಪ್ರಾರಂಭಿಸುವ ನಿರೀಕ್ಷೆಯನ್ನು ಇಡೀ ಶಿವಮೊಗ್ಗದ ಜನಸಾಮಾನ್ಯರು ಯುವಕರು ರೈತರು ಕಾತುರದಿಂದ ಕಾಯುತ್ತಿದ್ದರು. ಆದರೆ ರಾಜ್ಯ ಬಜೆಟ್ ಈ ಕುರಿತು ಬಹಳ ನಿರಾಸೆ ಉಂಟು ಮಾಡಿದ್ದು, ಈ ಮೂಲಕ ಭದ್ರಾವತಿ ತಾಲೂಕಿನ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ ಎಂದು ಖಂಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post