ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಕಂಕಣಬದ್ದರಾಗಿದ್ದು, ಇದಕ್ಕೆ ಪೂರಕವಾಗಿ ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.
ಹೊಸ ಸಿದ್ಧಾಪುರದಿಂದ ನಂಜಾಪುರ ಮೂಲಕ ಬೊಮ್ಮನಕಟ್ಟೆ ಸಂಪರ್ಕಿಸುವ 1 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ 400 ಕೋಟಿ ರೂ.ಗೂ ಅಧಿಕ ಅನುದಾನವನ್ನು ರಾಜ್ಯ ಸರ್ಕಾರದಿಂದ ತರಲಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ನಡೆಯುತ್ತಿದ್ದು, ಇನ್ನೂ ಹಲವು ಕಾರ್ಯಗಳು ಶೀಘ್ರ ಆರಂಭವಾಗಲಿವೆ ಎಂದರು.
ತರೀಕೆರೆ ರಸ್ತೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ 30 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.

ದೇವಸ್ಥಾನ ಸಮಿತಿಯ ಸದಸ್ಯರು ಶಾಸಕರನ್ನು ಸನ್ಮಾನಿಸಿದರು.
ಮೂಲಕಟ್ಟೆ ಶ್ರೀ ಚೌಡೇಶ್ವರಿ ದೇವಿ ಸಮುದಾಯ ಭವನದ 15 ಲಕ್ಷ ರೂ. ವೆಚ್ಚದಲ್ಲಿ ಮುಂದುವರೆದ ಕಾಮಗಾರಿಗೆ ಹಾಗೂ ಹೊಸ ಸಿದ್ದಾಪುರ ಶನೇಶ್ವರ ಮತ್ತು ಆದಿ ಶಕ್ತಿ ದೇವಸ್ಥಾನದ ಸುಮಾರು 35 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post