ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಅರಕೆರೆ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು Dr. D. Veerendra Heggade 5 ಲಕ್ಷ ರು. ಆರ್ಥಿಕ ನೆರವು ನೀಡಿದ್ದಾರೆ.
ಭಕ್ತಾಧಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠ ಟ್ರಸ್ಟ್ ವತಿಯಿಂದ ಜೀರ್ಣೋದ್ದಾರ ಕಾರ್ಯಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಆರ್ಥಿಕ ನೆರವು ನೀಡಲಾಗಿದೆ. ಧರ್ಮಸ್ಥಳದ ಕೆ. ಮಹಾವೀರ ಅಜ್ರಿಯವರು ಮಂಜೂರಾತಿ ಪತ್ರದೊಂದಿಗೆ ಚೆಕನ್ನು ಟ್ರಸ್ಟ್‌ಗೆ ಕಳುಹಿಸಿ ಕೊಟ್ಟಿದ್ದಾರೆ.













Discussion about this post