ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಬೊಮ್ಮನಕಟ್ಟೆ ಗ್ರಾಮದಲ್ಲಿ ಹುಲ್ಲಿನ ಬವಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಕೆಜಿ 60 ಗ್ರಾಂ ತೂಕದ ಗಾಂಜಾವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಗಾಂಜಾವನ್ನು #Marijuana ಹುಲ್ಲಿನ ಬಣವೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೇಪರ್‌ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ 4,13,000ರೂಗಳ ಮೌಲ್ಯದ 8 ಕೆಜಿ 60 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡು ಆರೋಪಿ ಅಬ್ದುಲ್ ಖದ್ದೂಸ್‌ನನ್ನು ಬಂದಿಸಿದ್ದಾರೆ.
ಆರೋಪಿ ವಿರುದ್ಧ ಠಾಣಾ 0016/2026 ಕಲಂ – 8(c),20(b) (ii) B) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















