ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುದವರಿಗೆ ಸೇರಿದ ಕಾರು ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಕಾರು ಚಲಾಯಿಸುವಾಗ ಏಕಾಏಕಿ ಕಾರು ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿಸಲು ಯತ್ನಿಸಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಭದ್ರಾವತಿ ಕಾಗದನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















