ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಸಿ.ಎನ್ ರಸ್ತೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪ ಚೌಡೇಶ್ವರಿ ದೇವಸ್ಥಾನದ ಸಮೀಪ ಜೂ.8ರ ತಡರಾತ್ರಿ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದು, ಸಮೀಪದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮಹಮದ್ ಗೌಸ್, ಮುಸ್ತಾಫಾ ಮತ್ತು ವಾಸಿಂರವರು ಜೈನುದ್ದೀನ್ ಎಂಬಾತನ ಇನ್ನೋವಾ ಕಾರಿನಲ್ಲಿ ಅನ್ವರ್ ಕಾಲೋನಿಯಿಂದ ಸೀಗೆಬಾಗಿಗೆ ಹೊರಟಿದ್ದು, ಈ ಸಂದರ್ಭದಲ್ಲಿ ಚಾಲಕ ಜೈನುದ್ದೀನ್ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿದೆ ಎನ್ನಲಾಗಿದೆ. ಈ ಸಂಬಂಧ ಸೈಯದ್ ಆಲ್ವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಾಲಕನ ನಿರ್ಲಕ್ಷ್ಯತನದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post