ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಕಾರೇಹಳ್ಳಿ ಬಳಿಯಲ್ಲಿ ಅರಣ್ಯ ಇಲಾಖೆ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಗಿದ್ದು, ಸ್ಥಳೀಯರ ಆತಂಕ ನಿವಾರಣೆಯಾಗಿದೆ. ಕಾರೇಹಳ್ಳಿ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಳ್ಳುವುದನ್ನು ಗಮನಿಸಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಅಲ್ಲದೇ, ಇಲ್ಲಿನ ಒಂದು ಮನೆಯಲ್ಲಿ ಸಾಕು ನಾಯಿಯ ಮೇಲೆ ದಾಳಿ ನಡೆಸಿದ್ದ ಚಿರತೆ ಅದನ್ನು ಅರ್ಧ ತಿಂದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳೀಯರ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನು ಇರಿಸಿತ್ತು. ನಿನ್ನೆ ರಾತ್ರಿ ಚಿರತೆ ಬೋನಿಗೆ ಬಿದ್ದಿದ್ದು, ಇದನ್ನು ಎಲ್ಲಿ ಬಿಡಲಾಗುತ್ತದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















