ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಂದು ದೇಶದಾದ್ಯಂತ ವೈಂಕುಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ಇಲ್ಲಿನ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.
ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ನಸುಕಿನ 4ರಿಂದ 5:30ರೊಳಗೆ ಪೂಜಾ ವಿಧಿವಿಧಾನಗಳು ನೆರವೇರಿದವು.
ಮೂಲ ದೇವರಿಗೆ ವಿಶೇಷ ಅಭಿಷೇಕ ಪೂಜೆ ಹಾಗೂ ಅಲಂಕಾರ ನಡೆಸಲಾಯಿತು. ಆ ನಂತರ 4ಗಂಟೆಯಿಂದ ದೇವಸ್ಥಾನದ ಮುಂಭಾಗದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಹಾಗೂ ಅಲಂಕಾರವನ್ನು ವಿಧಿವತ್ತಾಗಿ ನೆರವೇರಿಸಿ ದೇಗುಲದ ಆವರಣದಲ್ಲೇ ಉತ್ಸವ ನಡೆಸಲಾಯಿತು.
ಪ್ರಧಾನ ಅರ್ಚಕರಾದ ವೆ.ಬ್ರ. ಶ್ರೀ ರಂಗನಾಥ ಶರ್ಮ ಅವರು ನೇತೃತ್ವ ವಹಿಸಿದ್ದರು. ಕೋವಿಡ್ ನಿಯಮಾವಳಿ ಅನ್ವಯ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶವಿಲ್ಲ. ಆದರೂ ಭಕ್ತರು ನಿರಂತರವಾಗಿ ಆಗಮಿಸುತ್ತಿದ್ದು, ಹೆಚ್ಚಿನ ಭಕ್ತರಿಗೆ ಅವಕಾಶ ಮಾಡಿಕೊಡದೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆ.
ಪೂಜಾ ವಿಧಿವಿಧಾನದ ಸಂದರ್ಭದಲ್ಲಿ ಅರ್ಚಕರು ಹಾಗೂ ವೇದ ಪಾಠಶಾಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಂಡಿದ್ದು ವಿಶೇಷವಾಗಿತ್ತು.
ತಂತ್ರಿ ಅವರ ನೇತೃತ್ವದಲ್ಲಿ ಚಂಡೆ ವಾದ್ಯ ಪ್ರಮುಖ ಆಕರ್ಷಕವಾಗಿತ್ತು. ಸಹಾಯಕ ಅರ್ಚಕರಾದ ಶ್ರೀನಿವಾಸ್, ವೇದಪಾಠ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಕೆಲವೇ ಜನರು ಈ ವೇಳೆ ಪಾಲ್ಗೊಂಡಿದ್ದರು.
ರೇವಿನ್ಯೂ ಇನ್ಸ್‌ಪೆಕ್ಟರ್ ಪ್ರಶಾಂತ್ ಅವರು, ಕೋವಿಡ್ ನಿಯಮಾವಳಿಗಳ ಪಾಲನೆಗೆ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post