ಕಲ್ಪ ಮೀಡಿಯಾ ಹೌಸ್ | ಭಧ್ರಾವತಿ |
ಸೈಲ್ ನಿವೃತ್ತ ಒಕ್ಕೂಟದ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಬರ್ನ್ಪುರ ಉಕ್ಕು ಕಾರ್ಖಾನೆಯ ನಿವೃತ್ತ ಕಾರ್ಮಿಕ ಹಾಗು ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಅರಬಿಂದೊ ಮಿತ್ರ(66) ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ.
ನಗರದ ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ಅರಬಿಂದೂ ಮಿತ್ರ, ವಿಐಎಸ್‌ಎಲ್ ಆಥಿತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಬೆಳಿಗ್ಗೆ ಮಹಡಿ ಮೇಲಿನ ಕಾರಿಡಾರ್ ನಲ್ಲಿ ಧೂಮಪಾನ ಮಾಡುತ್ತಿರುವ ಸಮಯದಲ್ಲಿ ಅವರ ಕೈಯಲ್ಲಿದ್ದ ಬೀಗದ ಕೈ ಸಜ್ಜಾದ ಮೇಲೆ ಬಿತ್ತು. ಅದನ್ನು ಎತ್ತಿಕೊಳ್ಳಲು ಭಾಗಿದಾಗ ಅಯತಪ್ಪಿ ಬಿದ್ದ ಪರಿಣಾಮ ಗಂಬೀರ ಸ್ವರೂಪವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ವಿಐಎಸ್‌ಎಲ್ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ನ್ಯುಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Also read: ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ದೇವರ ಮೊರೆ ಹೋದ ಕಾರ್ಖಾನೆ ಕಾರ್ಮಿಕರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post