ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ದೊಡ್ಡಮಘಟ್ಟ ಗ್ರಾಮದಲ್ಲಿ ಅತಿ ಅವಶ್ಯವಿರುವ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ತಿಳಿಸಿದರು.
ದೊಡ್ಡಮಘಟ್ಟ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿರಂತರ ಮನವಿಗಳು ಬಂದ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಹೊಲ ನಮ್ಮ ರಸ್ತೆ ಅನುಧಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸ್ಥಳದಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಕಾಮಗಾರಿ ಬಗ್ಗೆ ಪೂರ್ಣ ವಿವರವನ್ನು ಅಧಿಕಾರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ದೊಡ್ಡಮಘಟ್ಟ ಗ್ರಾಮದ ರೈತ ಮುಖಂಡರು, ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















