No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಅನುಸುಧಾ ಮೋಹನ್ ಆಯ್ಕೆ

kalpa News by kalpa News
September 23, 2022
in ಭದ್ರಾವತಿ
0
ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಅನುಸುಧಾ ಮೋಹನ್ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. 13ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.

ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅನುಸುಧಾ ಮೋಹನ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.21ರ ವಿಜಯ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.4ರ ಅನುಪಮ ಚನ್ನೇಶ್ ಸ್ಪರ್ಧಿಸಿದ್ದರು. 35 ನಗರಸಭಾ ಸದಸ್ಯರು, 1 ವಿಧಾನಸಭಾ ಸದಸ್ಯರು ಮತ್ತು 1 ಲೋಕಸಭಾ ಸದಸ್ಯರು ಒಟ್ಟು 37 ಮತಗಳಿದ್ದು, ಈ ಪೈಕಿ ಲೋಕಸಭಾ ಸದಸ್ಯರು ಮತ ಚಲಾಯಿಸಿಲ್ಲ. ಉಳಿದ 36 ಮತಗಳ ಪೈಕಿ ಅನುಸುಧಾ ಮೋಹನ್ ಪಳನಿ 20, ವಿಜಯ 12 ಹಾಗು ಅನುಪಮ ಚನ್ನೇಶ್ 4 ಮತಗಳನ್ನು ಪಡೆದುಕೊಂಡರು. ಒಟ್ಟು 8 ಮತಗಳ ಅಂತರದಿಂದ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗಿದ್ದಾರೆ.
ತಮಿಳು ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ ಅನುಸುಧಾ ಮೊದಲ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಅಧ್ಯಕ್ಷರಾಗಿದ್ದಾರೆ. ಇವರ ಮಾವ ಕೆ. ಪಳನಿ ಅವರು ಸುಮಾರು 4 ಬಾರಿ ಪುರಸಭಾ ಸದಸ್ಯರಾಗಿದ್ದು, ಇವರ ರಾಜಕೀಯ ಅನುಭವ ಅನುಸುಧಾ ಅವರಿಗೆ ಮಾರ್ಗದರ್ಶನವಾಗಿದೆ.

ವನ್ನಿಯರ್‌ಗೆ ಪ್ರತಿಸ್ಪರ್ಧಿ ಮೊದಲಿಯಾರ್:
ತಮಿಳು ಜನಾಂಗದ ಒಳಪಂಗಡಗಳಾಗಿರುವ ವನ್ನಿಯರ್ ಗೌಂಡರ್ ಮತ್ತು ಆಗಮುಡಿ ಮೊದಲಿಯಾರ್ ಸಮಾಜದ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದು ವಿಶೇಷವಾಗಿತ್ತು. ಅನುಸುಧಾ ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ್ದು, ಇವರ ಪ್ರತಿಸ್ಪರ್ಧಿ ವಿಜಯ ಆಗಮುಡಿ ಮೊದಲಿಯಾರ್ ಸಮುದಾಯಕ್ಕೆ ಸೇರಿದ್ದಾರೆ.
ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-18, ಜೆಡಿಎಸ್-12, ಬಿಜೆಪಿ-4 ಮತ್ತು ಪಕ್ಷೇತರ-1 ಸ್ಥಾನ ಹೊಂದಿದೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡೇಗೌಡರ್ ಕಾರ್ಯ ನಿರ್ವಹಿಸಿದರು. ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.

ನಾಡಹಬ್ಬ ದಸರಾಗೆ ಹೊಸ ಅಧ್ಯಕ್ಷರು ;
ನಗರಸಭೆ ವತಿಯಿಂದ ಸೆ.26ರಿಂದ ನಾಡಹಬ್ಬ ದಸರಾ ಆಚರಣೆ ನಡೆಯಲಿದ್ದು, ಉಪಾಧ್ಯಕ್ಷರಾದ ಚನ್ನಪ್ಪ ಅವರು ಸುಮಾರು 1 ತಿಂಗಳಿನಿಂದ ಪ್ರಭಾರ ಅಧ್ಯಕ್ಷರಾಗಿದ್ದರು. ಇದೀಗ ನಾಡಹಬ್ಬ ದಸರಾ ಆಚರಣೆ ನೂತನ ಅಧ್ಯಕ್ಷೆ ಅನುಸುಧಾ ಅವರ ನೇತೃತ್ವದಲ್ಲಿ ನಡೆಯಲಿದೆ. ಸುಮಾರು 10 ದಿನಗಳ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ.

ಕ್ಷೇತ್ರದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ವನ್ನಿಯರ್ ಗೌಂಡರ್ ಸಮಾಜವನ್ನು ಗುರುತಿಸಿ ರಾಜಕೀಯದಲ್ಲಿ ಅವರಿಗೂ ಸೂಕ್ತ ಸ್ಥಾನಮಾನ ನೀಡಿರುವುದು ಸಂತಸ ಸಂಗತಿಯಾಗಿದೆ. ಗೌಂಡರ್ ಸಮಾಜ ಎಲ್ಲಾ ಸಮುದಾಯಗಳೊಂದಿಗೂ ಸೌಹಾರ್ದತೆ ಕಂಡುಕೊಂಡಿದ್ದು, ಇಂತಹ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
ನಂದಕುಮಾರ್, ರಾಜ್ಯಾಧ್ಯಕ್ಷರು, ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜ.

ನೂತನ ಅಧ್ಯಕ್ಷರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಹಾಗು ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜದ ರಾಜ್ಯಾಧ್ಯಕ್ಷ ನಂದಕುಮಾರ್, ತಾಲೂಕು ಅಧ್ಯಕ್ಷ ಮಣಿ ಎಎನ್‌ಎಸ್, ತಮಿಳು ಸಮಾಜದ ತಾಲೂಕು ಅಧ್ಯಕ್ಷ ರವಿ, ಆಗಮುಡಿ ಮೊದಲಿಯಾರ್ ಸಮಾಜದ ಅಧ್ಯಕ್ಷ ಕಣ್ಣಪ್ಪ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಯುವ ಘಟಕದ ಅಧ್ಯಕ್ಷರಾದ ಅಫ್ತಾಬ್ ಅಹಮದ್, ವಿನೋದ್ ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಅಭಿನಂದಿಸಿದರು.

ಅನುಸುಧಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ನಗರಸಭೆ ಮುಂಭಾಗ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ನಂತರ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಮಹಾತ್ಮಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಳಮಟ್ಟದಲ್ಲಿ ಕೆಲಸ ಮಾಡುವವರಿಗೆ ಆತ್ಮವಿಶ್ವಾಸ ತುಂಬಬೇಕು: ಸಿಎಂ ಬಸವರಾಜ ಬೊಮ್ಮಾಯಿ

Next Post

ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು

kalpa News

kalpa News

Next Post

ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL