ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಐಎಸ್‌ಎಲ್ VISL ಮತ್ತು ಎಂಪಿಎಂ ಕಾರ್ಖಾನೆಗಳ MPM Factory ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ಮನವಿ ಸಲ್ಲಿಸಲಾಯಿತು.
ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಜೊತೆಗೆ ಆಧುನಿಕ ನಗರವನ್ನಾಗಿ ರೂಪಿಸಲು ನಗರಸಭೆ 35 ವಾರ್ಡ್‌ಗಳಲ್ಲೂ ಪರಿಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬಾಕಿ ಉಳಿದಿರುವ ಒಳಚರಂಡಿ ಕಾಮಗಾರಿ ಕೈಗೆತ್ತಿಕೈಗೊಳ್ಳಲು, ಉದ್ಯಾನವನಗಳ ಅಭಿವೃದ್ಧಿ, ಕೆರೆಗಳ ಸಂರಕ್ಷಣೆ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಅಮೃತ್ 2.0 ನಗರಸಭೆಗೆ ಮಂಜೂರಾತಿ ಮಾಡುವುದು. ಜನ್ನಾಪುರ ಸರ್ವೆ ನಂ. 70ರ ಸುಮಾರು 45.20 ಎಕರೆ ವಿಸ್ತ್ರೀರ್ಣವುಳ್ಳ ಕೆರೆಗೆ ನಗರದ ವಿವಿಧ ಭಾಗಗಳಿಂದ ಕಲ್ಮಶಗೊಂಡ ನೀರು ಸೇರ್ಪಡೆಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಕಲ್ಮಶಗೊಂಡ ನೀರು ಕೆರೆಗೆ ಸೇರ್ಪಡೆಗೊಳ್ಳದಂತೆ ತಡೆಯಲು ಕೆರೆ ಬದಿಯಲ್ಲಿ ರಾಜಕಾಲುವೆ ನಿರ್ಮಾಣ ಮಾಡಲು ನಗರಸಭೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಗಿದೆ.
Also read: ಸಂಚಾರಿ ವಾಹನದ ಮೂಲಕ ಸಾರ್ವಜನಿಕರಿಗೆ ತಂಪು ಪಾನೀಯ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 70 ಕೆರೆಗಳಲ್ಲಿ ಬೌಂಡರಿ ನಿಗದಿಪಡಿಸಲು, ಬಸಿಕಾಲುವೆ ನಿರ್ಮಾಣ ಮಾಡಲು, ಕೆರೆಗಳನ್ನು ಅಭಿವೃದ್ಧಿಪಡಿಸಲು ನಗರಸಭೆಯಲ್ಲಿ ಆರ್ಥಿಕ ಕೊರತೆ ಹಿನ್ನಲೆಯಲ್ಲಿ ತುರ್ತಾಗಿ 5 ಕೋ. ರೂ. ಅನುದಾನ ನಗರಸಭೆಗೆ ಬಿಡುಗಡೆಗೊಳಿಸುವುದು. ಇದೇರೀತಿ ಕ್ಷೇತ್ರದ 23 ಗ್ರಾಮ ಪಂಚಾಯಿತಿಗಳಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಲು ಎಲ್ಲಾ ಪಂಚಾಯಿತಿಗಳಿಗೆ ತಲಾ 1 ಕೋ. ರೂ.ನಂತೆ ಒಟ್ಟು 23 ಕೋ. ರೂ. ಬಿಡುಗಡೆಗೊಳಿಸುವಂತೆ ಒತ್ತಾಯಿಸಲಾಗಿದೆ.
ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲೂ ಕೆರೆಕಟ್ಟೆಗಳ ಉತ್ಸವ ಹಾಗು ಕೊಳಚ ಪ್ರದೇಶಗಳಲ್ಲಿ ಸ್ಲಂ ನಿವಾಸಿಗಳ ದಿನಾಚರಣೆ ಆಚರಿಸಲು ಸೂಕ್ತ ಕ್ರಮ ಕೈಗೊಂಡು ಆದೇಶ ಹೊರಡಿಸುವಂತೆ ಕೋರಲಾಗಿದೆ.
ಈ ಸಂದರ್ಭದಲ್ಲಿ ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮುರುಗೇಶ್ ಸೇರಿದಂತೆ ಇನ್ನಿತರರು ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post