ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಅರಕೆರೆ ಗ್ರಾಮದ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಗುರುಗಳಾದ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು(೬೯) ಭಾನುವಾರ ಲಿಂಗೈಕ್ಯರಾಗಿದ್ದಾರೆ.
ಪತ್ನಿ, ಓರ್ವ ಪುತ್ರ ಇದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಸೋಮವಾರ ವಿರಕ್ತ ಮಠದಲ್ಲಿ ನಡೆಯಲಿದೆ. ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು ಹಿಂದೂ ಧರ್ಮ ಹಾಗು ಸಂಸ್ಕಾರಗಳ ಕುರಿತು ಹೆಚ್ಚಿನ ಪಾಂಡಿತ್ಯ ಹೊಂದಿದ್ದರು. ಹಲವು ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಈ ಕುರಿತು ಜಾಗೃತಿ ಮೂಡಿಸಿದ್ದರು.
ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಸ್ವತಃ ತಾವೇ ಮಾಸ್ಕ್‌ಗಳನ್ನು ಸಿದ್ದಪಡಿಸಿ ಉಚಿತವಾಗಿ ವಿತರಿಸಿದ್ದರು.
ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ವಂಶಪಾರಂಪರೆ ಮಠವಾಗಿದ್ದು, ಇವರ ತಂದೆಯ ನಿಧನ ನಂತರ ಶ್ರೀ ಮಠದ ಪೀಠಾಧಿಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.
ಲಿಂಗೈಕ್ಯರಾಗಿರುವ ಶ್ರೀಗಳಿಗೆ ಸಂತಾಪ:
ಲಿಂಗೈಕೈರಾಗಿರುವ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಬಿ.ಕೆ. ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗ್ರಾಮದ ಮುಖಂಡ ಎಚ್.ಎಲ್ ಷಡಾಕ್ಷರಿ, ಅರಕರೆ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post